ನಿವೃತ್ತ ಮುಖ್ಯ ಶಿಕ್ಷಕ ಎಚ್.ಎಸ್.ಟಿ.ಸ್ವಾಮಿಗೆ ರಾಜ್ಯ ಪ್ರಶಸ್ತಿ ಪ್ರದಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಸಮರ್ಥ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಏರ್ಪಡಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಚಿತ್ರದುರ್ಗದ ಸೈನ್ಸ್ ಫೌಂಡೇಶನ್ ಕಾರ್ಯದರ್ಶಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ಎಚ್.ಎಸ್.ಟಿ.ಸ್ವಾಮಿ ಯವರನ್ನು ವಿಜ್ಞಾನ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಸೇವೆಗಾಗಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ನಿವೃತ್ತ ಪ್ರಧಾನ ಸತ್ರ ನ್ಯಾಯಾಧೀಶ ಬಿ.ಶಿವಲಿಂಗೇಗೌಡ ಪ್ರಶಸ್ತಿ ಪ್ರದಾನ ಮಾಡಿದರು. ಕರ್ನಾಟಕ ಗಡಿ ಪ್ರದೇಶಗಳ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿ.ಸೋಮಶೇಖರ್ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಜಯವಾಣಿ ಪತ್ರಿಕೆಯ ರಾಘವೇಂದ್ರ ಗಣಪತಿ
, ಸಂಸ್ಥೆಯ ಅಧ್ಯಕ್ಷ ಎಸ್.ಆರ್.ವಿಜಯ ಸಮರ್ಥ ಭಾಗವಹಿಸಿದ್ದರು.

- Advertisement - 

 ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀಶ್ರೀ ಶಿವರುದ್ರಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 38 ಸಾಧಕರನ್ನು ಸನ್ಮಾನಿಸಲಾಯಿತು.

 

- Advertisement - 

Share This Article
error: Content is protected !!
";