ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದ್ವೇಷ ರಾಜಕಾರಣವನ್ನೇ ಉಸಿರಾಗಿಸಿಕೊಂಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ, ರಾಜ್ಯದಲ್ಲಿ ಕೇಂದ್ರದ ಪ್ರಾಯೋಜಿತ ಯೋಜನೆಗಳಿಗೆ ಸದಾ ಅಡ್ಡಗಾಲು ಹಾಕುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.
ಬೆಂಗಳೂರಿನ ಮೆಟ್ರೋ ಹಳದಿ ಮಾರ್ಗಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಟ್ಟು ಒಂದು ಕಾಲೂ ವರ್ಷವಾದರೂ(487 ದಿನಗಳು) ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಡರ್‌ಕರೆಯದೇ, ಕಾಮಗಾರಿ ಶುರುಮಾಡಿಲ್ಲ ಎಂದು ಜೆಡಿಎಸ್ ದೂರಿದೆ.
ದಿವಾಳಿ ಕಾಂಗ್ರೆಸ್‌ಸರ್ಕಾರದ ವಿಳಂಬ ಧೋರಣೆಗೆ “ನಮ್ಮ ಮೆಟ್ರೋ”ಗೆ 1 ದಿನಕ್ಕೆ ಬರೋಬ್ಬರಿ 2 ಕೋಟಿ ರೂ. ಆರ್ಥಿಕ ಹೊರೆಯಾಗುತ್ತಿದ್ದು, ನೂರಾರು ಕೋಟಿ ರೂ. ಸಾರ್ವಜನಿಕರ ತೆರಿಗೆ ಹಣ ನಷ್ಟವಾಗುತ್ತಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

