ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋವಿಡ್ ಸಮಯದಲ್ಲಿ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್‌ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ ಅವರಿಗೆ ಮರು ತನಿಖೆಯ ಜವಾಬ್ದಾರಿ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಚಾಮರಾಜನಗರ ದುರಂತ ನಡೆದ ವೇಳೆ ನಾನು ಹಾಗೂ ಸಿದ್ದರಾಮಯ್ಯ ಅವರು ಸ್ಥಳಕ್ಕೆ ತೆರಳಿ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಿದ್ದೆವು. ಮೃತರ ಕುಟುಂಬದವರನ್ನು ಭೇಟಿ ಮಾಡಲಾಗಿತ್ತು. ಈ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಅವರು ಯಾರ್ಯಾರ ತಪ್ಪಿದೆ ಎಂದು ಹೇಳಿದ್ದರು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.