ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರದ ಎನ್ಡಿಎ ಮೈತ್ರಿ ಸರ್ಕಾರ ರಾಜ್ಯದಲ್ಲಿ 3,06,150 ಮೆಟ್ರಿಕ್ಟನ್ತೊಗರಿ ಖರೀದಿ ಮಾಡಲು ಡಿಸೆಂಬರ್ತಿಂಗಳಲ್ಲಿ ಅನುಮತಿ ನೀಡಿದ್ದರೂ ರಾಜ್ಯ ಸರ್ಕಾರ ತೊಗರಿ ಖರೀದಿಗೆ ಮುಂದಾಗಿಲ್ಲ ಎಂದು ಜೆಡಿಎಸ್ ಆರೋಪಿಸಿದೆ.
ಆದರೆ, ರೈತ ಪರ ಕಾಳಜಿ ಇಲ್ಲದ 60% ಪರ್ಸೆಂಟ್ಕರ್ನಾಟಕ ಕಾಂಗ್ರೆಸ್ ಸರ್ಕಾರ, ಯಾವ ಜಿಲ್ಲೆಯಲ್ಲೂ ಬೆಂಬಲ ಬೆಲೆ ಯೋಜನೆ ಅಡಿ ತೊಗರಿ ಖರೀದಿ ಕೇಂದ್ರಗಳನ್ನು ಆರಂಭಿಸಿಲ್ಲ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ಸಿದ್ದರಾಮಯ್ಯ ಸರ್ಕಾರದ ವಿಳಂಬ ಧೋರಣೆಯಿಂದಾಗಿ ತೊಗರಿ ಬೆಳಗಾರರಿಗೆ ಬೆಲೆ ನಷ್ಟ ಅನುಭವಿಸುತ್ತಿದ್ದಾರೆ. ನಾಲಾಯಕ್ಕೃಷಿ ಮಂತ್ರಿ ಚಲುವರಾಯಸ್ವಾಮಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ್ ಪಾಟೀಲ್ ಇಬ್ಬರೂ ಕಾಣೆಯಾಗಿದ್ದು ಅವರನ್ನು ಹುಡುಕಿಕೊಡಿ ಎಂದು ರೈತರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಜೆಡಿಎಸ್ ಕಿಡಿ ಕಾರಿದೆ.

