ಜೂ.21ರಂದು ರಾಜ್ಯ ಮಾಹಿತಿ ಆಯುಕ್ತರ ಚಿತ್ರದುರ್ಗ ಜಿಲ್ಲಾ ಭೇಟಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತ ರುದ್ರಣ್ಣ ಹರ್ತಿಕೋಟೆ ಮತ್ತು ಎಸ್.ರಾಜಶೇಖರ್ ಅವರು ಇದೇ ಜೂನ್ 21ರಂದು ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಅಧಿಕಾರಿಗಳು ಮತ್ತು ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಮಾಹಿತಿ ಹಕ್ಕು ಕಾಯ್ದೆ 2005 ಪರಿಣಾಮಾಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಸಂವಾದ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.

- Advertisement - 

ಮಾಹಿತಿ ಹಕ್ಕು ಕಾಯ್ದೆ ಮಹತ್ವದ ಬಗ್ಗೆ ಸಾರ್ವಜನಿಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಜೂನ್ 21ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕ ಮಾಹಿತಿ ಅಧಿಕಾರಿಗಳೊಂದಿಗೆ ಸಂವಾದ ನಡೆಸುವರು.

- Advertisement - 

ಮಧ್ಯಾಹ್ನ 2 ರಿಂದ 3 ರವರೆಗೆ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸಾರ್ವಜನಿಕರೊಂದಿಗೆ ಚರ್ಚಿಸುವ ಕಾರ್ಯಕ್ರಮವಿದೆ ಎಂದು ಕರ್ನಾಟಕ ಮಾಹಿತಿ ಆಯೋಗ ಪ್ರಕಟಣೆ ತಿಳಿಸಿದೆ.

 

- Advertisement - 

 

Share This Article
error: Content is protected !!
";