ನವೆಂಬರ್-22ರಂದು ರಾಜ್ಯಮಟ್ಟದ ಎನ್.ಪಿ.ಇ.ಪಿ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆ(ಎನ್.ಪಿ.ಇ.ಪಿ)ಕಾರ್ಯಕ್ರಮದಡಿ ರಾಜ್ಯಮಟ್ಟದ ಪಾತ್ರಾಭಿನಯ ಮತ್ತು ಜಾನಪದ ನೃತ್ಯ ಸ್ಪರ್ಧೆಗಳನ್ನು ನಗರದ ಮುರುಘಾಮಠದಲ್ಲಿ ನವೆಂಬರ್-೨೨ ರಂದು ಆಯೋಜಿಸಲಾಗಿದೆ ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ತಿಳಿಸಿದರು.

ಡಯಟ್‌ನಲ್ಲಿ ಶನಿವಾರ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಡಿ.ಎಸ್.ಇ.ಆರ್.ಟಿ ನಿರ್ದೇಶಕರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆಸಲಾಗುತ್ತಿದ್ದು ರಾಜ್ಯದ ೩೪ ಶೈಕ್ಷಣಿಕ ಜಿಲ್ಲೆಗಳಿಂದ ರಾಜ್ಯಮಟ್ಟದ ಸ್ಪರ್ಧೆಗೆ ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಪ್ರತಿ ಜಿಲ್ಲೆಯಿಂದ ೧೧ ರಂತೆ ೩೭೪ ವಿದ್ಯಾರ್ಥಿಗಳು, ೨ ರಂತೆ ೬೮ ಮೇಲ್ವಿಚಾರಕ ಶಿಕ್ಷಕgನ್ನೊಳಗೊಂಡತೆ  ೪೪೨ ಜನ ಭಾಗವಹಿಸುತ್ತಾರೆ ಎಂದರು.

 ಜಿಲ್ಲಾ ಎನ್.ಪಿ.ಇ.ಪಿ ನೋಡಲ್ ಅಧಿಕಾರಿ ಎಸ್.ಬಸವರಾಜು ಮಾತನಾಡಿ, ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯನ್ನು ೧೯೮೦ ರಲ್ಲಿ ಭಾರತ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಶಾಲೆಗಳಲ್ಲಿ ಗುಣಮಟ್ಟ ಸುಧಾರಣೆಯ ಅವಿಭಾಜ್ಯ ಅಂಗವಾಗಿ ಪ್ರಾರಂಭಿಸಲಾಯಿತು. ಎನ್.ಪಿ,,ಪಿ ಭಾರತ ಸರ್ಕಾರದ ಧನ ಸಹಾಯ ಪಡೆದ ಮೌಲ್ಯಯುತ ಯೋಜನೆಯಾಗಿದೆ.

ಶಾಲೆಗಳಲ್ಲಿ ಶೈಕ್ಷಣಿಕ ಕಲಿಕೆಯೊಂದಿಗೆ ಸಹಪಠ್ಯ ಚಟುವಟಿಕೆಗಳ ಮೂಲಕ ಜೀವನ ಕೌಶಲ್ಯವನ್ನು ಬೆಳೆಸುವ ಸನ್ನಿವೇಶ ಕಲ್ಪಿಸಿ, ಜನಸಂಖ್ಯೆ ಮತ್ತು ಸುಸ್ಥಿರ ಅಭಿವೃದ್ಧಿ ನಡುವಿನ ಅಂತರ್ ಸಂಬಂಧದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

ರಾಷ್ಟ್ರಮಟ್ಟದಲ್ಲಿ ಎನ್.ಸಿ.ಇ.ಆರ್.ಟಿ ಅನುಷ್ಠಾನ ಸಂಸ್ಥೆಯಾಗಿದ್ದು, ರಾಜ್ಯಮಟ್ಟದಲ್ಲಿ ಡಿ.ಎಸ್.ಇ.ಆರ್.ಟಿ ಯು ಅನುಷ್ಠಾನ ಸಂಸ್ಥೆಯಾಗಿದೆ. ವಿದ್ಯಾರ್ಥಿಗಳಲ್ಲಿ ಮಾತುಗಾರಿಕೆ, ಅಭಿನಯ ಕೌಶಲ್ಯ, ವರ್ತನೆಗಳು, ಜೀವನ ಕೌಶಲ್ಯಗಳು, ಸಂವೇದನಾಶೀಲತೆ ಬೆಳೆಸಲು ಸ್ಪರ್ಧಾ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ತಿಳಿಸಿದರು.

 ಥೀಮ್ ಆಧಾರಿತ ಸ್ಪರ್ಧೆಗಳು: ಪಾತ್ರಾಭಿನಯ ಮತ್ತು ಜಾನಪದ ನೃತ್ಯ ಸ್ಪರ್ಧೆಗೆ ೫ ಥೀಮ್‌ಗಳನ್ನು ನಿಗದಿಪಡಿಸಲಾಗಿದೆ. ಸ್ಪರ್ಧೆಯು ಶಾಲಾ, ತಾಲೂಕು, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಹಂತಗಳಲ್ಲಿ ನಡೆಯಲಿದ್ದು ಜಿಲ್ಲಾ ಹಂತದಲ್ಲಿ ಪ್ರಥಮ ಸ್ಥಾನ ಪಡೆದ ತಂಡ ರಾಜ್ಯ ಹಂತದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ.

ಪಾತ್ರಾಭಿನಯ ಸ್ಪರ್ಧೆಗೆ ಪ್ರತಿ ತಂಡದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಓದುತ್ತಿರುವ  ೯ನೇ ತರಗತಿಯ ೪ ರಿಂದ ೫ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿದ್ದು ಆರೋಗ್ಯಕರ ಬೆಳವಣಿಗೆ, ಪೌಷ್ಠಿಕ ಆಹಾರ ಮತ್ತು ಯೋಗಕ್ಷೇಮ, ವೈಯಕ್ತಿಕ ಸುರಕ್ಷತೆ, ಇಂಟರ್‌ನೆಟ್ ಮತ್ತು ಮಾಧ್ಯಮ ಸಾಕ್ಷರತೆಯ ಸುರಕ್ಷಿತ ಬಳಕೆ, ಮಾದಕ ವಸ್ತುಗಳ ದುರ್ಬಳಕೆ ತಡೆಗಟ್ಟುವಿಕೆ ಮತ್ತು ನಿರ್ವಹಣೆ ಥೀಮ್‌ಗಳಲ್ಲಿ ಯಾವುದಾದರೊಂದು ಆಯ್ಕೆ ಮಾಡಿಕೊಂಡು ಹಿಂದಿ/ಇಂಗ್ಲೀಷ್ ಭಾಷೆಯಲ್ಲಿ ಪ್ರಸ್ತುತಪಡಿಸುವರು. 

ಜಾನಪದ ನೃತ್ಯ ಸ್ಪರ್ಧೆಯಲ್ಲಿ ಹುಡುಗರು ಮತ್ತು ಹುಡುಗಿಯರಿಗೆ ಸಮಾನ ಅವಕಾಶ, ಮಗುವಿನ ಬೆಳವಣಿಗೆಯಲ್ಲಿ ಅವಿಭಕ್ತ ಕುಟುಂಬದ ಪಾತ್ರ, ಪರಿಸರ ಸಂರಕ್ಷಣೆ, ಮಾದಕ ವಸ್ತುವಿನ ದುರ್ಬಳಕೆ ತಡೆಗಟ್ಟುವಿಕೆ, ಹದಿಹರೆಯದ ಸಮಯದಲ್ಲಿ ಆರೋಗ್ಯಕರ ಸಂಬಂಧಗಳು ಥೀಮ್‌ನಲ್ಲಿ ಆಯ್ಕೆ ಮಾಡಿಕೊಂಡು ೮ ಮತ್ತು ೯ ನೇ ತರಗತಿಯ ೪ ರಿಂದ ೬ ವಿದ್ಯಾರ್ಥಿಗಳು ಭಾಗವಹಿಸಿ ಸ್ಥಳೀಯ ಭಾಷೆಯಲ್ಲಿ ಪ್ರಸ್ತುತಪಡಿಸಲು ಅವಕಾಶವಿದೆ ಎಂದು ಮಾಹಿತಿ ನೀಡಿದರು.

 ಉಪನ್ಯಾಸಕ ಆರ್.ನಾಗರಾಜು ಮಾತನಾಡಿ, ಸ್ಪರ್ಧಾ ಕಾರ್ಯಕ್ರಮಕ್ಕೆ ಸ್ವಾಗತ ಸಮಿತಿ, ವೇದಿಕೆ ಸಮಿತಿ, ಆಹಾರ ಸಮಿತಿ, ವಸತಿ ಸಮಿತಿ, ತೀರ್ಪುಗಾರರ ಸಮಿತಿ, ನೊಂದಣಿ ಸಮಿತಿ ರಚಿಸಿಕೊಂಡಿದ್ದು ಶಿಕ್ಷಣ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಹಂತದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಕಾರ ನೀಡುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

- Advertisement -  - Advertisement -  - Advertisement - 
Share This Article
error: Content is protected !!
";