ರಾಜ್ಯ ರಸ್ತೆ ಸಾರಿಗೆ ಬಸ್ ಗಳ ಓಡಾಟ ಆ.05 ರಿಂದ  ಸ್ಥಗಿತ: ಸುರೇಶ್ ಬಾಬು

News Desk

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸಾರಿಗೆ ನೌಕರರ 38 ತಿಂಗಳ ವೇತನ ಪರಿಷ್ಕರಣೆ ಹಿಂಬಾಕಿಯನ್ನು ಕೂಡಲೇ ಬಿಡುಗಡೆ ಮಾಡಬೇಕು ಇಲ್ಲವಾದಲ್ಲಿ ಆಗಸ್ಟ್ 05 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಸಿಐಟಿಯು ಸಂಘಟನೆಯ ಜಿಲ್ಲಾ ಸಂಚಾಲಕ ಸುರೇಶ್ ಬಾಬು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಸ್‌ಆರ್‌ಟಿಸಿ ನೌಕರರು ಹಗಲು ರಾತ್ರಿ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ಅವರಿಗೆ ವೇತನ ಕೂಡ ಕಡಿಮೆ ಇರುತ್ತದೆ. ಇಷ್ಟಾದರೂ ನೌಕರರ ದುಡಿಮೆಯ ಹಣ ನೀಡದೆ ಶೋಷಣೆ ಮಾಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು.

- Advertisement - 

ಮುಖ್ಯಮಂತ್ರಿಗಳು ಹೇಳುವುದು ಒಂದು. ಮಾಡುವುದು ಒಂದಾಗಿದೆ. 38 ತಿಂಗಳ  ವೇತನ ಪರಿಷ್ಕರಣೆ ಹಿಂಬಾಕಿಯನ್ನು ಕೇಳಿದರೆ ಸಾರಿಗೆ ಸಚಿವರು ಹಿಂದಿನ ಸರ್ಕಾರದ ಮೇಲೆ ಬೆರಳಿಟ್ಟು ತೋರಿಸುತ್ತಿದ್ದಾರೆ ಇದರಿಂದ ಸಮಸ್ಯೆ ಬಗೆಹರಿಯದೆ ಉಳಿದೆ ಎಂದು ಕಳವಳ ವ್ಯಕ್ತಡಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಮಾಡಿದರೆ ಎಸ್ಮೋ  ಜಾರಿ ಮಾಡುತ್ತೇವೆ ಎಂದು ಹೆದರಿಸುವ ತಂತ್ರಗಾರಿಕೆಯನ್ನು ಸರ್ಕಾರ ಮಾಡುತ್ತಿದೆ‌. ಅಲ್ಲದೆ ಸರ್ಕಾರಿ ಬಸ್ ಗಳನ್ನು ನಿಲ್ಲಿಸುತ್ತೇವೆ. ಖಾಸಗಿ ಬಸ್ ಗಳನ್ನು ಓಡಿಸುತ್ತೇವೆ ಎಂದು ಹೇಳುವ‌ ಮೂಲಕ ಸಾರಿಗೆ ಸಚಿವರು ಉಂಬ ತನ ಮೆರೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

- Advertisement - 

ಪಂಚ ಗ್ಯಾರಂಟಿಗಳನ್ನು ನೀಡಿದ್ದೇವೆ ಎಂದು ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾ ಬಂದಿದ್ದಾರೆ. ಆದರೆ ಸಾರಿಗೆ ನೌಕರರ 38 ತಿಂಗಳ ಪರಿಷ್ಕರಣೆ ವೇತನ ಹಿಂಬಾಕಿಯನ್ನು ನೀಡಲು ಆಗುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು‌.

ಸಾರಿಗೆ ನೌಕರರಿಗೆ ಏನಾದರೂ ಮಾಡಿ ಸರ್ಕಾರದ ಯೋಜನೆಗಳನ್ನು  ಜಾರಿ ಮಾಡಿ ಎಂದು ಹೇಳುತ್ತದೆ. ಆದರೆ ನೌಕರರ ಬೇಡಿಕೆಗಳನ್ನು ಮಾತ್ರ ಈಡೇರಿಸುವುದಿಲ್ಲ. ಆದ್ದರಿಂದ ಸಾರಿಗೆ ನೌಕರರ ಬೇಡಿಕೆ ಈಡೇರವರೆಗೂ ಆ. 05 ರಿಂದ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದೆವೆ. ಮುಷ್ಕರದಲ್ಲಿ ಕೆಎಸ್‌ಆರ್‌ಟಿಸಿ ಸ್ಟಾಪ್ ಅಂಡ್ ವರ್ಕರ್ಸ್ ಫೆಡರೇಶನ್,

ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಶನ್, ಕೆಎಸ್‌ಆರ್‌ಟಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಧಿಕಾರಿಗಳ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘಗಳು ಸೇರಿದಂತೆ ಇತರೆ ಸಂಘ ಸಂಸ್ಥೆಗಳು ಸಹ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ರಹೀಂ ಸಾಬ್, ಉಮಾಪತಿ, ಎನ್.ಪಿ ರವಿ, ಟಿ.ಅಶೋಕ್, ಉಮೇಶ್, ರಾಜಪ್ಪ, ಎ.ಕೆ ಮಹಾದೇವಪ್ಪ, ಮನೋಹರ್, ಅಜ್ಜಣ್ಣ, ಗೊಲ್ಲಾಳಪ್ಪ ಗೌಡ ಸುದ್ದಿಗೋಷ್ಠಿಯಲ್ಲಿ ಇದ್ದರು.

 

 

 

Share This Article
error: Content is protected !!
";