ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗೃಹ ಸಚಿವ ಪರಮೇಶ್ವರ್‌ಅವರ ಆಪ್ತ ಡಿಜಿಪಿ ರಾಮಚಂದ್ರ ರಾವ್‌ರಾಸಲೀಲೆ ಬಯಲಾಗಿದ್ದು, ರಾಜ್ಯ ಪೊಲೀಸ್‌ಇಲಾಖೆಯೇ ತಲೆತಗ್ಗಿಸುವಂತಾಗಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ಪೊಲೀಸ್‌ಸಮವಸ್ತ್ರದ ಘನತೆ ಮರೆತು, ಕಚೇರಿಯಲ್ಲೇ ಮಹಿಳೆಯರೊಂದಿಗೆ ಇಂತಹ ಕೃತ್ಯ ಎಸಗಿರುವುದು ಅಕ್ಷಮ್ಯ ಅಪರಾಧ.
ಅಕ್ರಮ ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ನೆರವು ನೀಡಿದ ಆರೋಪವೂ ಸಹ ಡಿಜಿಪಿ ರಾಮಚಂದ್ರ ರಾವ್‌ಮೇಲಿತ್ತು.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿಷ್ಕ್ರಿಯ ಆಡಳಿತ ಹಾಗೂ ಅಸಮರ್ಥ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರಿಂದ ನಮ್ಮ ರಾಜ್ಯದ ಹೆಮ್ಮೆಯ ಪೊಲೀಸ್‌ಇಲಾಖೆಯ ಮಾನ ಮತ್ತೊಮ್ಮೆ ಹರಾಜಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ತತಕ್ಷಣವೇ ಡಿಜಿಪಿ ರಾಮಚಂದ್ರ ರಾವ್‌ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.

