ಸ್ತ್ರೀಭೂಣ ಹತ್ಯೆ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಸ್ತ್ರೀ ಭೂಣ ಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಮಹಿಳೆಯರ ಮೇಲೆ ದೌರ್ಜನ್ಯ, ಭ್ರೂಣ ಹತ್ಯೆ, ಶಿಶು ಹತ್ಯೆ, ಬಾಲ್ಯ ವಿವಾಹ, ಲಿಂಗ ತಾರತಮ್ಯ, ವರದಕ್ಷಿಣೆ ಪಿಡುಗು, ಕೌಟುಂಬಿಕ ಕಿರುಕುಳ ಅಪೌಷ್ಟಿಕತೆ, ಅಭದ್ರತೆ ವಿರುದ್ದ ನಿರಂತರವಾಗಿ ಹೋರಾಟಗಳನ್ನು ನಡೆಸಿಕೊಂಡು ಬರುತ್ತಿದೆ. ಸ್ತ್ರೀಭೂಣ ಹತ್ಯೆಗೆ ಕೈಜೋಡಿಸುವವರ ವಿರುದ್ದ ಕಠಿಣ ಶಿಕ್ಷೆ ವಿಧಿಸಬೇಕು.

- Advertisement - 

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ. ಪೋಷಕರುಗಳಿಗೂ ಕಠಿಣ ಶಿಕ್ಷೆಯಾಗಬೇಕು. ಗರ್ಭಪಾತ ತಡೆಗಟ್ಟಬೇಕು. ಸ್ತ್ರೀಭೂಣ ಹತ್ಯೆ, ಬಾಲ್ಯ ವಿವಾಹ ಕುರಿತು ಪಠ್ಯದಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸಬೇಕು. ಅಶ್ಲೀಲ ಸಿನಿಮಾ, ಜಾಹಿರಾತು, ಸಾಹಿತ್ಯ, ವೆಬ್‌ಸೈಟ್‌ಗಳನ್ನು ನಿಷೇಧಿಸಿ ಮದ್ಯ ಮಾದಕ ಮಹಿಳೆಯರ ಮತ್ತು ಮಕ್ಕಳ ಕಳ್ಳಸಾಗಾಣಿಕೆ ನಿಲ್ಲಬೇಕು.

ಫಾಸ್ಟ್‌ಟ್ರಾಕ್ ನ್ಯಾಯಾಲಯಗಳ ಸಂಖ್ಯೆ ಹೆಚ್ಚಿಸಬೇಕು. ಆಂತರಿಕ ದೂರು ಸಮಿತಿಗಳನ್ನು ಶಾಲಾ-ಕಾಲೇಜುಗಳಲ್ಲಿ ರಚಿಸಬೇಕೆಂದು ಒತ್ತಾಯಿಸಿದರು. ಎ.ಐ.ಎಂ.ಎಸ್.ಎಸ್. ಜಿಲ್ಲಾ ಸಂಚಾಲಕಿ ಸುಜಾತ ಡಿ. ಕುಮುದ ಇವರುಗಳು ಈ ಸಂದರ್ಭದಲ್ಲಿದ್ದರು.

- Advertisement - 

 

 

Share This Article
error: Content is protected !!
";