ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ;
ತಾಲೂಕಿನ ತೂಬಗೆರೆ ಹೋಬಳಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷರಾಗಿ ನೆಲುಗುದಿಗೆ ಮುನಿರಾಜು ಆಯ್ಕೆಯಾದರು.
ಹಾಡೋನಹಳ್ಳಿ ಗ್ರಾಮ ಪಂಚಾಯಿತಿಗೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ,ಅಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಅಧ್ಯಕ್ಷರಾಗಿ ನೆಲುಗುದಿಗೆ ಮುನಿರಾಜು ಅವರನ್ನು ಆಯ್ಕೆ ಮಾಡಿದ್ದೇವೆ ಎಂದು ಚುನಾವಣೆ ಅಧಿಕಾರಿ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕಿ ಗಿರಿಜಾಂಬ ಹೇಳಿದರು.
ನೆಲುಗುದಿಗೆ ಮುನಿರಾಜ್ ಅಧ್ಯಕ್ಷನರಾಗುತ್ತಿದ್ದಂತೆ ಅವರ ಮುಖಂಡರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ನೂತನವಾಗಿ ಅಧ್ಯಕ್ಷರಾಗಿರುವ ನೆಲುಗುದಿಗೆ ಮುನಿರಾಜು ಮಾತನಾಡಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ ಅವರ ಮಾರ್ಗಸೂಚಿಯಂತೆ ನಾನು ಇಂದು ಅಧ್ಯಕ್ಷನಾಗಿದ್ದೇನೆ ಅವರಿಗೆ ಮೊದಲು ಧನ್ಯವಾದ ತಿಳಿಸುತ್ತೇನೆ, ಇನ್ನು ಪಂಚಾಯತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಕೆಲಸಗಳನ್ನು ನಿರ್ವಹಿಸುವೆ, ಆದ್ಯತೆ ಮೇರೆಗೆ ಕಾರ್ಯ ಸೂಚಿಯನ್ನು ಸಿದ್ಧಪಡಿಸಿಕೊಂಡು ಗ್ರಾಮ ಪಂಚಾಯತಿಯನ್ನು ಮಾದರಿ ಪಂಚಾಯಿತಿಯನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದೇನೆ ಎಂದರು ಜೊತೆಗೆ ನನ್ನನ್ನು ಅಧ್ಯಕ್ಷನಾಗಿ ಮಾಡಿರುವ ಎಲ್ಲಾ ಸದಸ್ಯರಿಗೂ ಧನ್ಯವಾದಗಳು ತಿಳಿಸಿದರು.
ಕರ್ನಾಟಕ ತೆಂಗು ನಾರು ಮಂಡಳಿಯ ಅಧ್ಯಕ್ಷ ವೆಂಕಟೇಶ್ ಬಾಬು ಮಾತನಾಡಿ ನಮ್ಮ ಜೆಡಿಎಸ್ ಪಕ್ಷದಿಂದ ಇಂದು ನೆಲುಗುದಿಗೆ ಮುನಿರಾಜು ಅವರನ್ನು ಅವೀರೋಧವಾಗಿ ಆಯ್ಕೆ ಮಾಡಿದ್ದೇವೆ ಅವರು ಗ್ರಾಮ ಪಂಚಾಯತಿಯಲ್ಲಿ ನಿಷ್ಠೆಯಿಂದ ಕೆಲಸ ಮಾಡಿಕೊಂಡು ಹೋಗುತ್ತಾರೆ, ಪ್ರತಿ ಗ್ರಾಮಗಳಿಗೆ ತೆರಳಿ ಜನರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕೊಡುತ್ತಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಾಡೋನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಮಂಜುಳಾ ಪುರುಷೋತ್ತಮ್, ಎಚ್.ಎ.ನಾಗರಾಜ್, ಮುದ್ದು ಕೃಷ್ಣಪ್ಪ, ಮೇಳೆಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್, ತೂಬಗೆರೆ ಹೋಬಳಿ ಜೆಡಿಎಸ್ ಯುವತ್ ಅಧ್ಯಕ್ಷ ಮುರಳಿ, ಬಚ್ಚಹಳ್ಳಿ ನಾಗರಾಜ್ ತಿರುಮಗೊಂಡನಹಳ್ಳಿ ಅಶೋಕ್, ಹರೀಶ್ ನಾಯಕ್, ಉದಯ ಆರಾಧ್ಯ ಹಾಗೂ ಪಂಚಾಯತಿಯ ಎಲ್ಲಾ ಸದಸ್ಯರುಗಳು ಹಾಜರಿದ್ದರು.