ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಮೇ 25 ರಂದು ನಡೆಯಲಿರುವ ಬೆಂಗಳೂರು ಹಾಲು ಒಕ್ಕೂಟದ ಚುನಾವಣೆಯಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಆಕಾಂಕ್ಷಿಯಾಗಿ ಬಿ ಸಿ ಆನಂದ್ ಕುಮಾರ್ ಇಂದು ನಾಮಪತ್ರ ಸಲ್ಲಿಸಲು ಸಕಲ ಸಿದ್ಧತೆ ನಡೆಸಿದ್ದು , ತಾಲೂಕಿನ ಎಲ್ಲಾ ಡೈರಿಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ವರ್ಗ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು ಮೇ 16ರಂದು ಬೆಳಗ್ಗೆ 9 ಗಂಟೆಗೆ ದೊಡ್ಡಬಳ್ಳಾಪುರ ಶಿಬಿರ ಕಚೇರಿಯಿಂದ ಹೊರಟು ಮಧ್ಯಾಹ್ನ ಸುಮಾರು 12 ಗಂಟೆಗೆ ನಾಮಪತ್ರ ಸಲ್ಲಿಸಲು ತೀರ್ಮಾನಿಸಲಾಗಿದೆ, ಈ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ತಾಲೂಕಿನ ಜನಪ್ರಿಯ ಶಾಸಕರಾದ ಧೀರಜ್ ಮುನಿರಾಜು , ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ. ಮುನೇಗೌಡರನ್ನು ಒಳಗೊಂಡಂತೆ ಹಲವು ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆ ಇದ್ದು , ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕ ವಾದ್ದರಿಂದ ನಾಳೆ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಮಕ್ಷಮದಲ್ಲಿ ತಾಲೂಕಿನ ಶಾಸಕರು ಹಾಗೂ ಎನ್‌ಡಿಎ ಮುಖಂಡರ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಲಾಗುವುದು ಎಂದರು.
ಸಂಸದ ಡಾ. ಕೆ ಸುಧಾಕರ್, ತಾಲೂಕಿನ ಶಾಸಕ ಧೀರಜ್ ಮುನಿರಾಜು ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ ಮುನೇಗೌಡ ರವರ ನೇತೃತ್ವದಲ್ಲಿ ಬಮೂಲ್ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ಆಯ್ಕೆಯನ್ನು ಶೀಘ್ರವಾಗಿ ಮಾಡುವ ನಿರೀಕ್ಷೆ ಇದೆ , ನಾನು ಪ್ರಬಲ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದರು .
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಡೈರಿ ಅಧ್ಯಕ್ಷರು ಕಾರ್ಯದರ್ಶಿಗಳು ಹಾಗೂ ಸಿಬ್ಬಂದಿ ವರ್ಗ ಸಿರಿದಂತೆ ಹಿತೈಷಿಗಳು ಭಾಗವಹಿಸಿ ಆಶೀರ್ವದಿಸುವಂತೆ ಮನವಿ ಮಾಡಿದರು.