ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಲವಂತದ ಮತಾಂತರಕ್ಕೆ ಒಪ್ಪದ ಪತ್ನಿ ಹಾಗೂ ಅತ್ತೆಯ ಮೇಲೆ ಇತ್ತೀಚೆಗೆ ಶ್ರೀರಂಗಪಟ್ಟಣದಲ್ಲಿ ನಡೆದ ಗಂಭೀರ ಹಲ್ಲೆ ಪ್ರಕರಣ ಭಾರಿ ಜನಾಕ್ರೋಶಕ್ಕೆ ಕಾರಣವಾಗಿದ್ದು, ಇದನ್ನ ಖಂಡಿಸಿ ಇಂದು ಹಿಂದೂ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಹಾಗು ಜನಜಾಗೃತಿ ಆಂದೋಲನಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಮುಸ್ಲಿಂ ಮತ್ತು ಕ್ರೈಸ್ತ ಧರ್ಮಕ್ಕೆ ಬಲವಂತದ ಮತಾಂತರಕ್ಕೆ ಒಳಗಾಗದವರ ಮೇಲೆ ದೌರ್ಜನ್ಯ ನಡೆಸುತ್ತಿರುವವರನ್ನು ಮುಲಾಜಿಲ್ಲದೆ ಕಾನೂನಿನ ಕಟಕಟೆಗೆ ಒಳಪಡಿಸಬೇಕು, ಅಮಾಯಕ ಹಿಂದೂಗಳನ್ನ ಟಾರ್ಗೆಟ್ ಮಾಡಿ, ಹಣದ ಆಮಿಷ, ಬೆದರಿಕೆ ಒಡ್ಡುವ ಮೂಲಕ ಮತಾಂತರಗೊಳಿಸುತ್ತಿರುವ ಸಂಘ, ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರನ್ನ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.