ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನಕ್ಕಾಗಿ ಹೋರಾಟ-ಮುದ್ದಜ್ಜಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಸರ್ಕಾರಿ ನೌಕರರಾಗಿ ಮೃತಪಟ್ಟಲ್ಲಿ ಅವರ ಅಂತ್ಯಕ್ರಿಯೆಗೆ ಸಂಘದಿಂದ ಐದು ಸಾವಿರ ಸೇರಿದಂತೆ ಮತ್ತಿತರ ಸರ್ಕಾರಿ ನೌಕರ ಸ್ನೇಹಿ ತೀರ್ಮಾನಗಳನ್ನು ಮಾಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ತಿಳಿಸಿದರು.

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣ, ಸರ್ಕಾರಿ ನೌಕರರಿಗೆ ಜ್ಯೋತಿ ಸಂಜೀವಿನಿ ಯೋಜನೆ ಜಾರಿ, ಎನ್.ಪಿ.ಎಸ್ ರದ್ದು ಹಳೇ ಪದ್ದತಿಯಂತೆ ಪಿಂಚಿಣಿ ಜಾರಿ ಹಾಗೂ ರಾಜ್ಯ ಸರ್ಕಾರಿ ನೌಕರರಿಗೂ ಸಹ ಕೇಂದ್ರ ಮಾದರಿ ವೇತನ ನೀಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡುವ ಸಲುವಾಗಿ ರಾಜ್ಯ ಸಂಘದ ಜೊತೆಯಲ್ಲಿ ಹೋರಾಟ ಮಾಡಲಾಗುವುದೆಂದು ಹೇಳಿದರು.

ನೂತನ ಪದಾಧಿಕಾರಿಗಳು ೨೦೨೪ ರಿಂದ ೨೦೨೯ರವರೆಗೆ ಕಾರ್ಯ ನಿರ್ವಹಿಸಲಿದ್ದೇವೆ. ಸರ್ಕಾರಿ ನೌಕರರಿಗೆ ಅನುಕೂಲವಾಗುವಂತೆ ಕಾರ್ಯ ಮಾಡಲಾಗುವುದು. ಈ ಹಿನ್ನಲೆಯಲ್ಲಿ ಈ ಹಿಂದಿನ ಕಾರ್ಯಕಾರಿ ಸಮಿತಿಯು ಚಿತ್ರದುರ್ಗ ತಾಲ್ಲೂಕಿನ ಸರ್ಕಾರಿ ನೌಕರರು ಮೃತಪಟ್ಟಲ್ಲಿ ಅವರ ಅಂತ್ಯ ಸಂಸ್ಕಾರಕ್ಕೆ ಎರಡು ಸಾವಿರ ರೂ.ಗಳನ್ನು ನೀಡುತ್ತಿತ್ತು, ನಮ್ಮ ಮೊದಲನೇ ಸಭೆಯಲ್ಲಿ ಈ ಮೊತ್ತವನ್ನು ೫ ಸಾವಿರ ರೂ. ನೀಡಲು ತೀರ್ಮಾನ ಮಾಡಲಾಯಿತು. ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಸೂಕ್ತ ಜಾಗ ನೋಡಲಾಗುತ್ತಿದೆ ಮಂಜೂರಾದ ತಕ್ಷಣ ಸಮುದಾಯ ಭವನ ನಿರ್ಮಾಣ ಮಾಡಲು ಕಾರ್ಯಕಾರಿ ಸಮಿತಿ ಮುಂದಾಗಲಿದೆ ಎಂದರು.

ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಜ್ಯೋತಿ ಸಂಜೀವಿನಿ ಯೋಜನೆ ಜನವರಿಯಲ್ಲಿ ಜಾರಿ ಮಾಡಲು ಮುಂದಾಗಿದೆ. ಸಾಧ್ಯವಾದಷ್ಟು ಶೀಘ್ರವಾಗಿ ಜಾರಿ ಮಾಡುವಂತೆ ಸರ್ಕಾರವನ್ನು ರಾಜ್ಯ ಸಮಿತಿಯ ಸಹಯೋಗದೊಂದಿಗೆ ಒತ್ತಾಯ ಮಾಡಲಾಗುವುದು. ೨೦೦೬ರ ನಂತರದ ನೇಮಕಾತಿಯವರಿಗೆ ಪಿಂಚಣಿ ರದ್ದು ಮಾಡಿದೆ. ಸರ್ಕಾರ ಜಾರಿಗೆ ತಂದಿರುವ ಎನ್.ಪಿ.ಎಸ್‌ ಪದ್ಧತಿ ರದ್ದು ಮಾಡಿ ಹಳೇ ಪದ್ದತಿಯಂತೆ ಪಿಂಚಿಣಿ ವ್ಯವಸ್ಥೆ ಜಾರಿ ಮಾಡುವಂತೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರದ ನೌಕರರಿಗೆ ವೇತನ ತಾರತಮ್ಯ ಇದೆ, ಇದನ್ನು ಹೋಗಲಾಡಿಸಲು ಸರ್ಕಾರ ಮಂದಾಗಬೇಕಿದೆ. ಕೇಂದ್ರ ಸರ್ಕಾರ ತನ್ನ ನೌಕರರಿಗೆ ಯಾವ ರೀತಿ ವೇತನ ನೀಡುತ್ತದ್ದೇಯೇ ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ತನ್ನ ನೌಕರರಿಗೂ ವೇತನ ನೀಡುವಂತೆ ಹೋರಾಟ ಮಾಡಲಾಗುವುದು ಎಂದು ಅಧ್ಯಕ್ಷ ಮಾಲತೇಶ್ ಮುದ್ದಜ್ಜಿ ತಿಳಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಖಂಜಾಚಿ ಮಲ್ಲಿಕಾರ್ಜನ್, ರಾಜ್ಯ ಪರಿಷತ್ ಸದಸ್ಯ ರಾಜಪ್ಪ, ಕಾರ್ಯದರ್ಶಿ ಶ್ರೀನಿವಾಸ್, ನಿರ್ದೆಶಕ ಜಗ್ಗೇಶ್ ಉಪಸ್ಥಿರಿದ್ದರು.

- Advertisement -  - Advertisement - 
Share This Article
error: Content is protected !!
";