ಜಿಲೆಟಿನ್ ಸ್ಫೋಟಕ್ಕೆ ವಿದ್ಯಾರ್ಥಿ ಮೋನಿಶ್‌ ಅವರ ಮೂರು ಬೆರಳು ತುಂಡು

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ಎಸ್. ಪುರ ಹೋಬಳಿ ಇಡಗೂರು ಗ್ರಾಮದಲ್ಲಿ ಕಳೆದ ಅಕ್ಟೋಬರ್ ೯ರಂದು ಜಿಲೆಟಿನ್ ಸ್ಪೋಟದಿಂದ ಕೈ ಬೆರಳುಗಳು ತುಂಡಾಗಿದ್ದ  ಸರ್ಕಾರಿ ಹಿರಿಯ ಪ್ರೌಢಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಮೋನಿಶ್ ಗೌಡ ಅವರಿಗೆ ಬರವಣಿಗೆ ತರಬೇತಿ ನೀಡಬೇಕೆಂದು  ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

        ವಿದ್ಯಾರ್ಥಿಯ ತಾಯಿ ನಳಿನ ತಮ್ಮ ಮಗನ ಚಿಕಿತ್ಸಾ ವೆಚ್ಚವನ್ನು ಭರಿಸಲು ಕ್ರಮ ಕೈಗೊಂಡ ಅಭಿನಂದನೆ ಸಲ್ಲಿಸಲು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮೋನಿಶ್ ಗೌಡ ಅವರ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದರು.

ಜಿಲೆಟಿನ್ ಸ್ಫೋಟದಿಂದ ಮೋನಿಶ್ ಗೌಡನ ಬಲಗೈನ ಮೂರು ಬೆರಳುಗಳು ತುಂಡಾಗಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಕೈಬೆರಳುಗಳು ಪೂರ್ಣ ಗುಣಮುಖವಾದ ನಂತರ ಫಿಜ಼ಿಯೋಥೆರಪಿ ಮೂಲಕ ಬರವಣಿಗೆ ತರಬೇತಿ ನೀಡಲು ಕ್ರಮ ಕೈಗೊಳ್ಳಬೇಕೆಂದು  ದೂರವಾಣಿ ಮೂಲಕ ಸ್ಥಳದಲ್ಲೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಚಂದ್ರಶೇಖರ್ ಅವರಿಗೆ ಸೂಚನೆ ನೀಡಿದರು.

 

 

- Advertisement -  - Advertisement -  - Advertisement - 
Share This Article
error: Content is protected !!
";