ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಭಿವೃದ್ಧಿ ಶೂನ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಸರ್ಕಾರಿ ಶಾಲಾ-ಕಾಲೇಜುಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವಲ್ಲಿಯೂ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ವಾಗ್ದಾಳಿ ಮಾಡಿದೆ.
ಯಾವ ಕ್ಷಣದಲ್ಲಾದರೂ ಕುಸಿದು ಬೀಳುವ ಸ್ಥಿತಿಯಲ್ಲಿರುವ ಕಟ್ಟಡಗಳಲ್ಲಿ ನಿತ್ಯವೂ ವಿದ್ಯಾರ್ಥಿಗಳು ಜೀವಭಯದಲ್ಲೇ ಕುಳಿತು ಪಾಠ ಕೇಳುವಂತಾಗಿದೆ. ಸರ್ಕಾರಿ ಶಾಲೆ-ಕಾಲೇಜುಗಳೆಂದರೆ ಇಷ್ಟೊಂದು ತಾತ್ಸಾರವೇ..? ಎಂದು ಜೆಡಿಎಸ್ ಪ್ರಶ್ನಿಸಿದೆ.
ರಾಜ್ಯದ ಶಿಕ್ಷಣ ಸಚಿವರು ಹಾಗೂ ಉನ್ನತ ಶಿಕ್ಷಣ ಸಚಿವರು ಅದ್ಯಾವ ತುರ್ತು ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೋ ದೇವರೇ ಬಲ್ಲ. ರೈತ ವಿದ್ಯಾನಿಧಿ ಯೋಜನೆಗೆ ಕತ್ತರಿ ಹಾಕಿರುವ ಸಿದ್ದರಾಮಯ್ಯ ಸರ್ಕಾರ, ಬಡ ಮಕ್ಕಳ ವಿದ್ಯಾಭ್ಯಾಸಕ್ಕೂ ಕಲ್ಲುಹಾಕುತ್ತಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.