ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು:
ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಮತ್ತು ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಂಡು ಸಂಘಟಿತರಾಗಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ ಉಮೇಶ್ ಹೇಳಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮೊಳಕಾಲ್ಮೂರು ವತಿಯಿಂದ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದನಗರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರ ಕಟ್ಟುವಲ್ಲಿ ವಿದ್ಯಾರ್ಥಿಗಳು ಮುಂದೆ ಇರಬೇಕು, ವಿದ್ಯಾರ್ಥಿಗಳು ಸಂಘಟಿತರಾಗಿ, ವಿದ್ಯಾರ್ಥಿಗಳು ನಾಳೆಯ ಪ್ರಜೆಯಲ್ಲ, ಇವತ್ತಿನ ಪ್ರಜೆಯಾಗಿ ಎಂದು ತಿಳಿಸಿದರು.
ಪ್ರತಿಷ್ಟಿತ ಶಾಲೆಯಲ್ಲಿ ಓದಿದರೆ ಮಾತ್ರ ಉನ್ನತ ಕೆಲಸ ಸಿಗುತ್ತದೆಂದು ಭಾವಿಸಿದ್ದಾರೆ. ಪ್ರತಿಯೊಂದಕ್ಕೂ ಶಿಕ್ಷಣವೇ ಮದ್ದು ಎಂಬುದನ್ನು ಸಾವಿತ್ರಿಬಾಯಿಫುಲೆ, ಅಂಬೇಡ್ಕರ್ ಅವರಂತಹ ಮಹನೀಯರು ತಿಳಿಸಿಕೊಟ್ಟಿದ್ದಾರೆ ಎಂದರು.
ಎಬಿವಿಪಿ ಕನಕರಾಜ್ ಕೋಡಿಹಳ್ಳಿ ಮಾತನಾಡಿ, ಎಬಿವಿಪಿಯು ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಸತ್ಥಜೆಯನ್ನಾಗಿಸಿ ದೇಶದ ಆಸ್ತಿಯನ್ನಾಗಿಸುವ ಕಾರ್ಯದಲ್ಲಿ ತೊಡಗಿರುವ ಸಂಘಟನೆಯಾಗಿದೆ. ವಿದ್ಯಾರ್ಥಿಗಳು ಸದಸ್ಯತ್ವ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಎಬಿವಿಪಿ ಕಾರ್ಯಕರ್ತರಾದ ಪ್ರೀತಮ್, ಸೂರ್ಯ ತೇಜು, ಅನಿಲ್, ಕನಕ, ವಿದ್ಯಾರ್ಥಿಗಳಿದ್ದರು.