ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ನಗರದ ಪ್ರತಿಷ್ಠಿತ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಡೆಸ್ಟಿನಿ ಲೋಗೋ ಲಾಂಚ್ ಮತ್ತು ಯತಿಕ್ ಡೇ ಕಾರ್ಯಕ್ರಮವನ್ನು ಶನಿವಾರ ಅದ್ದೂರಿಯಾಗಿ ಆಚರಿಸಲಾಯಿತು.
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಕಲಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಹಾಗೂ ಕುಟುಂಬದ ಎಲ್ಲಾ ಸದಸ್ಯರುಗಳು ಜ.೧೦, ೨೦೨೬ ರಿಂದ ೧೩ ರವರೆಗೆ ನಾಲ್ಕು ದಿನಗಳ ಕಾಲ ನಡೆಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪೂರ್ವ ಪ್ರಾಥಮಿಕ, ಎಲ್.ಕೆ.ಜಿ. ಯು.ಕೆ.ಜಿ. ಒಂದನೆ ತರಗತಿಯಿಂದ ಹತ್ತನೆ ತರಗತಿ, ಪದವಿ ಪೂರ್ವ, ಪದವಿ, ನರ್ಸಿಂಗ್, ಫಾರ್ಮಸಿ, ಪ್ರಕೃತಿ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಸಾವಿರಾರು ವಿದ್ಯಾರ್ಥಿಗಳು ಅದ್ದೂರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು. ಎಲ್ಲಾ ವಿಭಾಗಗಳ ಪ್ರಾಂಶುಪಾಲರು, ಶಿಕ್ಷಕರುಗಳು ವರ್ಣರಂಜಿತ ಸಮಾರಂಭದಲ್ಲಿ ಭಾಗವಹಿಸಿದ್ದರು.

