ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ಒಂದು ರಾಷ್ಟ್ರ – ಒಂದು ಚುನಾವಣೆ ಸುಂದರ ಪ್ರಜಾಪ್ರಭುತ್ವ ರಾಷ್ಟ್ರದ ಶ್ರೇಷ್ಠ ಕಲ್ಪನೆ ” ಬೆಂಗಳೂರಿನ ಮಲ್ಲೇಶ್ವರಂನ ಹವ್ಯಕ ಭವನದಲ್ಲಿ ಆಯೋಜಿಸಿದ್ದ ‘ಒಂದು ರಾಷ್ಟ್ರ ಒಂದು ಚುನಾವಣೆಗಾಗಿ ವಿದ್ಯಾರ್ಥಿಗಳು‘ ವಿದ್ಯಾರ್ಥಿ ನಾಯಕರ ಸಭೆಯ ಉದ್ಘಾಟನೆ ನೆರವೇರಿಸಲಾಯಿತು.
ದೇಶದ ಜನತೆಯ ಬಹು ವರ್ಷಗಳ ಆಶಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯ ಹೆಚ್ಚಿಸಿ ಸುಭದ್ರ ಭಾರತ ಕಟ್ಟುವ ನಿಟ್ಟಿನಲ್ಲಿ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಏಕಕಾಲದಲ್ಲಿ ಚುನಾವಣೆ ನಡೆಯುವುದರಿಂದ ಚುನಾವಣಾ ವೆಚ್ಚದಲ್ಲಿ ಭಾರಿ ಇಳಿಕೆಯಾಗಲಿದ್ದು, ಸರ್ಕಾರಿ ನೌಕರರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡುವುದು ಕಡಿಮೆಯಾಗುತ್ತದೆ. ರಾಜಕೀಯ ಪಕ್ಷಗಳೂ ಚುನಾವಣೆ ಬಿಟ್ಟು, ಆಡಳಿತದತ್ತ ಗಮನಕೊಡಲು ಸಾಧ್ಯವಾಗುತ್ತದೆ.
ಪದೇ ಪದೇ ಚುನಾವಣೆ ನಡೆಯುವುದರಿಂದ ಜನರಿಗೆ ಆಗುವ ತೊಂದರೆಗಳ ನಿವಾರಣೆ ಸೇರಿದಂತೆ ಆಡಳಿತಾತ್ಮಕ ಮತ್ತು ಭದ್ರತಾ ಪಡೆಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ, ಈ ಕುರಿತು ಎಲ್ಲೆಡೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರದ ಭವಿಷ್ಯದ ರೂವಾರಿಗಳಾಗಿರುವ ವಿದ್ಯಾರ್ಥಿ ಸಮೂಹ ಸಂಕಲ್ಪ ತೊಡಬೇಕೆಂಬ ಕರೆ ನೀಡಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ವಕ್ತಾರರು, ಒಂದು ದೇಶ ಒಂದು ಚುನಾವಣೆಯ ದಕ್ಷಿಣ ಭಾರತದ ಉಸ್ತುವಾರಿ anilkantony, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು, ಪ್ರಖ್ಯಾತ ಕೊಳಲು ವಾದಕರು ಹಾಗೂ ಖ್ಯಾತಸಂಗೀತ ನಿರ್ದೇಶಕರಾದ ಪಂಡಿತ್ ಪ್ರವೀಣ್ ಗೋಡ್ಖಿಂಡಿ, ಅಂತಾರಾಷ್ಟ್ರೀಯ ಕ್ರಿಕೆಟ್ ಪಟು ವೇದಾ ಕೃಷ್ಣಮೂರ್ತಿ,

ಒಂದು ದೇಶ ಒಂದು ಚುನಾವಣೆಯ ರಾಜ್ಯ ಸಂಚಾಲಕರು ಮತ್ತು ವಿಧಾನಪರಿಷತ್ ಸದಸ್ಯರಾದ ಕೆ.ಎಸ್. ನವೀನ್, ಒಂದು ದೇಶ ಒಂದು ಚುನಾವಣೆಯ ರಾಜ್ಯ ಸಹ-ಸಂಚಾಲಕರು ಹಾಗೂ ರಾಜ್ಯ ಮುಖ್ಯ ವಕ್ತಾರರಾದ ಅಶ್ವತ್ಥನಾರಾಯಣ್, ಸೇರಿದಂತೆ ಯುವ ಸಾಧಕರು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು.

