ಚಂದ್ರವಳ್ಳಿ ನ್ಯೂಸ್, ಬೆಂಗಳೂರು;
ವಿಶಿಷ್ಟ ಸಾಧನೆ ಮಾಡಿದ ವಿದ್ಯಾರ್ಥಿಗಳು, ಉತ್ತಮ ಶಿಕ್ಷಕರನ್ನು ಬಸವನಗುಡಿಯ ಆಚಾರ್ಯ ಶಿಕ್ಷಣ ಸಂಸ್ಥೆಯಲ್ಲಿ ಗೌರವಿಸಲಾಯಿತು.
10ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ 36 ವರ್ಷಗಳಿಂದ ನಿರಂತರವಾಗಿ ಶೇ 100 ರಷ್ಟು ಅತ್ಯುತ್ತಮ ಶ್ರೇಣಿಯಲ್ಲಿ ಫಲಿತಾಂಶವನ್ನು ಸಾಧಿಸುತ್ತಾ ಬಂದಿರುವ ಶಿಕ್ಷಣ ಸಂಸ್ಥೆಯಲ್ಲಿ ಉತ್ತಮವಾಗಿ ಪಾಠ ಪ್ರವಚನ ಮಾಡುತ್ತಿರುವ ಶಿಕ್ಷಕರನ್ನು ಆಚಾರ್ಯ ಶಿಕ್ಷಣ ಸಂಸ್ಥೆಯ ವಿಶ್ವಸ್ಥ ಮಂಡಳಿಯ ಅಧ್ಯಕ್ಷ ಸಿ.ಎ. ಡಾ. ವಿಷ್ಣುಭರತ್ ಅಲಂಪಲ್ಲಿ ಅವರು ಗೌರವಿಸಿದರು.
ಎ.ಪಿ.ಎಸ್ ಪಬ್ಲಿಕ್ ಶಾಲೆಯ ಆರು ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆಯಲ್ಲಿ ಜಯಗಳಿಸಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸುತ್ತಿದ್ದಾರೆ. ಗಣರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.
ಸಂಸ್ಥೆಯ ಪ್ರಧಾನಕಾರ್ಯದರ್ಶಿ ಎ.ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು