ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ-ಸಾಧಿಕ್ ಪಾಷಾ

News Desk

ಚಂದ್ರವಳ್ಳಿ ನ್ಯೂಸ್,ದೊಡ್ಡಬಳ್ಳಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ಇವರ ವತಿಯಿಂದ ನಗರದ ಕೊನಘಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ
 ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮ  ನಡೆಸಲಾಯಿತು. 

  ಕಾರ್ಯಕ್ರಮವನ್ನು  ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್  ಸಾದಿಕ್ ಪಾಷಾ  ಉದ್ಘಾಟನೆ ಮಾಡಿ ಮಾತನಾಡಿದ ಅವರು ಶಾಲಾ ಮಕ್ಕಳಿಗೆ ಮಾದಕ ವಸ್ತುಗಳ ಬಗ್ಗೆ ಮಾಹಿತಿ ನೀಡಿದರು.

- Advertisement - 

ಮಾದಕ ವಸ್ತುಗಳಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ತಮ್ಮ ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದ್ದು ಹಾಳು ಮಾಡಿಕೊಳ್ಳದೆ ಉತ್ತಮ ಶಿಕ್ಷಣ ಪಡೆದು ಉತ್ತಮ ಜೀವನ ರೂಪಿಸಿಕೊಳ್ಳಿ ಎಂದು ಮಾಹಿತಿ ನೀಡಿದರು. 

ನಿವೃತ್ತ ಉಪನ್ಯಾಸಕ ಮಹಾಲಿಂಗಯ್ಯ ಮಾತನಾಡಿ ದುಶ್ಚಟಗಳಿಂದ ಆಗುವ ಪರಿಣಾದ ಬಗ್ಗೆ ಮಾಹಿತಿ ನೀಡಿ ಮಾತನಾಡಿ   ವಿದ್ಯಾರ್ಥಿಗಳು ಮಾದಕ ವಸ್ತುವಿಂದ ದೂರವಿರಬೇಕು ಹಾಗೂ ತಂದೆ ತಾಯಿ ಗುರುಗಳ  ಮಾತುಗಳನ್ನು ಕೇಳಿ ಸಮಾಜಕ್ಕೆ ಉತ್ತಮ ಪ್ರಜೆ ಆಗಬೇಕೆಂದು ತಿಳಿಸಿದರು.

- Advertisement - 

ಕಾಲೇಜಿನ ಪ್ರಬಾರಿ ಪ್ರಾಂಶುಪಾಲರಾದ ಹೇಮಾವತಿ ಉಪನ್ಯಾಸಕರ ವೃಂದ   ತಾಲೂಕಿನ ಯೋಜನಾಧಿಕಾರಿಗಳಾದ ದಿನೇಶ್ ವಲಯದ ಮೇಲ್ವಿಚಾರಕರಾದ ರಘು ಮತ್ತು ಸೇವಾಪ್ರತಿನಿಧಿಗಳು ವಿದ್ಯಾರ್ಥಿಗಳು ಉಪಸ್ಥಿರಿದ್ದರು.

 

 

Share This Article
error: Content is protected !!
";