ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ಮಧುರೆ ವಲಯದ ಕಾಡನೂರು ಗ್ರಾಮದ ಶ್ರೀ ರಾಮ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ನಡೆಸಲಾಯಿತು.
ವಿದ್ಯಾರ್ಥಿ ಜೀವನದಲ್ಲಿ ಪ್ರೌಢ ಶಿಕ್ಷಣ ಅತೀ ಮುಖ್ಯ ಹಂತವಾಗಿದ್ದು ಭವಿಷ್ಯ ರೂಪಿಸಿಕೊಳ್ಳಲು ಹೆಚ್ಚಿನ ಅವಕಾಶಗಳು ಇರುತ್ತದೆ.
ವಿದ್ಯಾರ್ಥಿಗಳುದುಶ್ಚಟಗಳಿಂದ ದೂರವಿರಬೇಕೆಂದು ಹಾಗೂ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆದು ಎಲ್ಲರಿಗೂ ಮಾದರಿ ಆಗಬೇಕೆಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಸುಧಾ ಬಾಸ್ಕರ್ ತಿಳಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಗೋವಿಂದರಾಜು ಮಾತನಾಡಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ತಮ್ಮ ಆರೋಗ್ಯದ ಜೊತೆಗೆ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ದುರಂತವೆನಿಸುತ್ತಿದೆ,
ಶಿಕ್ಷಣವನ್ನು ಉತ್ತಮವಾಗಿ ಪಡೆದಲ್ಲಿ ತಮ್ಮ ಮನೆಗೂ ತಮ್ಮ ಊರಿಗೂ ತಾನು ಶಿಕ್ಷಣ ಪಡೆದ ಸಂಸ್ಥೆಗೆ ಒಳ್ಳೆಯ ಹೆಸರು ಬರುತ್ತದೆ ಇದನ್ನು ಉಳಿಸಿಕೊಂಡು ಜೀವನದಲ್ಲಿ ಮುಂದುವರೆಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಶೆಯಿಂದ ಆಗುವ ಅಪಾಯದ ಬಗ್ಗೆ ಕಿರು ಚಿತ್ರ ಪ್ರದರ್ಶನ ಮಾಡಿದರು. ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಗೋಪಾಲ ಕೃಷ್ಣರವರು, ಒಕ್ಕೂಟದ ಅಧ್ಯಕ್ಷರಾದ ಲೋಕೇಶ್,ಶಾಲಾ ಶಿಕ್ಷಕರು ಹಾಗೂ ವಲಯದ ಮೇಲ್ವಿಚಾರಕರಾದ ಗಿರಿಜಾ, ಸೇವಾ ಪ್ರತಿನಿಧಿ ಜಯಮ್ಮ ,ದೇವಿಕಾ ಹಾಗೂ ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.