ವಿದ್ಯಾರ್ಥಿಗಳು ದುಶ್ಚಟದಿಂದ ದೂರವಿರಿ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದೊಡ್ಡಬಳ್ಳಾಪುರ ತಾಲೂಕು ಇವರ ವತಿಯಿಂದ ಕೊನಘಟ್ಟ ಪ್ರೌಢಶಾಲಾ ಹಾಗೂ ಪದವಿಪೂರ್ವ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮ ನಡೆಯಿತು 

ವಿದ್ಯಾರ್ಥಿ ಜೀವನದಲ್ಲಿ ಪ್ರೌಢ ಶಿಕ್ಷಣ ಹಾಗೂ ಪದವಿ ಶಿಕ್ಷಣ ಭವಿಷ್ಯ ರೂಪಿಸಿಕೊಳ್ಳಲು ಹೆಚ್ಚಿನ ಅವಕಾಶಗಳು ಇರುತ್ತದೆ.  ವಿದ್ಯಾರ್ಥಿಗಳುದುಶ್ಚಟಗಳಿಂದ ದೂರವಿರಬೇಕೆಂದು ಹಾಗೂ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಪಡೆದು ಎಲ್ಲರಿಗೂ ಮಾದರಿ ಆಗಬೇಕೆಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಗೋವಿಂದರಾಜು ಮಾತನಾಡಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಮಾದಕ ವಸ್ತುಗಳ ಸೇವನೆಯಿಂದ ತಮ್ಮ ಆರೋಗ್ಯದ ಜೊತೆಗೆ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರುವುದು ದುರಂತವೆನಿಸುತ್ತಿದೆ.

ಶಿಕ್ಷಣವನ್ನು ಉತ್ತಮವಾಗಿ ಪಡೆದಲ್ಲಿ ತಮ್ಮ ಮನೆಗೂ ತಮ್ಮ ಊರಿಗೂ ತಾನು ಶಿಕ್ಷಣ ಪಡೆದ ಸಂಸ್ಥೆಗೆ ಒಳ್ಳೆಯ ಹೆಸರು ಬರುತ್ತದೆ ಇದನ್ನು ಉಳಿಸಿಕೊಂಡು ಜೀವನದಲ್ಲಿ ಮುಂದುವರೆಬೇಕೆಂದು ತಿಳಿಸಿದರು. 

ಕಾರ್ಯಕ್ರಮದಲ್ಲಿ ನಶೆಯಿಂದ ಆಗುವ ಅಪಾಯದ ಬಗ್ಗೆ ಕಿರು ಚಿತ್ರ ಪ್ರದರ್ಶನ ಮಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಸುಧಾ ಭಾಸ್ಕರ್, ಕಾಲೇಜು ಪ್ರಾಂಶುಪಾಲರು, ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಲಯದ ಮೇಲ್ವಿಚಾರಕ ರಘು, ಸೇವಾ ಪ್ರತಿನಿಧಿ ಪುಷ್ಪ ಹಾಗೂ ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";