ಉಪ ನೋಂದಣಿ ಕಚೇರಿಗಳು ಮಾರ್ಚ್ 28 ಮತ್ತು 29 ರಂದು ಕಾರ್ಯನಿರ್ವಹಣೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ರಾಜ್ಯದಾದ್ಯಂತ ಇರುವ ಎಲ್ಲಾ ಉಪ ನೋಂದಣಿ ಕಚೇರಿಗಳು ಈ ವಾರಾಂತ್ಯದ ರಜಾ ದಿನಗಳಾದ ದಿನಾಂಕ 28-03-2026ರ ಶನಿವಾರ ಮತ್ತು 29-03-2026ರ ಭಾನುವಾರದಂದು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಆರ್ಥಿಕ ವರ್ಷದ ಅಂತ್ಯದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ನೋಂದಣಿ ಸೌಲಭ್ಯ ಒದಗಿಸಲು ಈ ಕ್ರಮ ಕೈಗೊಳ್ಳಲಾಗಿದೆ.

- Advertisement - 

ನೋಂದಣಿ ಪ್ರಕ್ರಿಯೆ ಹಾಗೂ ಇಲಾಖೆಯ ಇತರ ಸೇವೆಗಳನ್ನು ಪಡೆಯಲು ಸಾರ್ವಜನಿಕರು ಈ ದಿನಗಳಲ್ಲಿ ಕಚೇರಿಗೆ ಭೇಟಿ ನೀಡಬಹುದಾಗಿದೆ.

ಈ ವಿಶೇಷ ಅವಕಾಶವನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕೆಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";