ಯಶಸ್ವಿಯಾಗಿ 2 ವರುಷ ಪೂರೈಸಿದ ಶಕ್ತಿ ಯೋಜನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement - 

ಶಾಲಾ ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳು, ಕುಟುಂಬ ನಿರ್ವಹಣೆಗಾಗಿ ದುಡಿಮೆಗೆ ತೆರಳುವ ಮಹಿಳೆಯರು, ತನ್ನ ಮತ್ತು ತನ್ನವರ ವೈದ್ಯಕೀಯ ಚಿಕಿತ್ಸೆಯ ಉದ್ದೇಶಕ್ಕಾಗಿ ದೂರದ ಊರಿಗೆ ಪ್ರಯಾಣ ಬೆಳೆಸುವ ತಾಯಂದಿರ ಮುಖದಲ್ಲಿ ನೆಮ್ಮದಿಯ ಮಂದಹಾಸ ಮೂಡಿರುವುದು ಈ ಯೋಜನೆಯ ಯಶಸ್ಸಿಗೆ ಹಿಡಿದ ಕೈಗನ್ನಡಿ.

- Advertisement - 

ʼಶಕ್ತಿʼ ಜಾರಿಯಾದ ನಂತರದಿಂದ ಈವರೆಗೆ 475 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದು, ಈವರೆಗಿನ ಒಟ್ಟು ಟಿಕೆಟ್‌ ಮೌಲ್ಯ 12 ಸಾವಿರ ಕೋಟಿ ರೂ. ದಾಟಿದೆ.

ಒಂದೊಳ್ಳೆ ಉದ್ದೇಶದೊಂದಿಗೆ ನಾವು ಜಾರಿಗೊಳಿಸಿದ ಯೋಜನೆಯೊಂದು ನಿರೀಕ್ಷೆಗೂ ಮೀರಿ ಅರ್ಹರನ್ನು ತಲುಪಿರುವುದು ನನ್ನಲ್ಲಿ ಸಾರ್ಥಕತೆಯ ಭಾವನೆ ಮೂಡಿಸಿದೆ ಎಂದು ಸಿಎಂ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";