ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕಾಲೇಜಿನಲ್ಲಿ ಶಿಸ್ತು ಪಾಲನೆ ಜೊತೆಯಲ್ಲಿ ಉತ್ತಮ ಫಲಿತಾಂಶಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಹಿರಿಯೂರಿನ ವಾಣಿ ಸಕ್ಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ (2024-25 ನೇ ಶೈಕ್ಷಣಿಕ ಸಾಲಿನ ಕ್ರೀಡಾಕೂಟ, ಸಾಂಸ್ಕೃತಿಕ ಉತ್ಸವ, ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್ ರೋವರ್ಸ್ ಮತ್ತು ರೇಂಜರ್ಸ್ ಚಟುವಟಿಕೆಗಳ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರು ಆದ ಸುಧಾಕರ್ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಪಠ್ಯದ ಜೊತೆಯಲ್ಲಿ ಕ್ರೀಡೆಗಳು ಸೇರಿದಂತೆ ಇತರೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಸದಾ ಕ್ರಿಯಶೀಲವಾಗಿರಬೇಕು, ಸತತ ಪರಿಶ್ರಮದ ಮೂಲಕ ಹೆಚ್ಚಿನ ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತರಬೇಕೆಂದು ಕಿವಿ ಮಾತು ಹೇಳಿದರು.
ಪ್ರಾಂಶುಪಾಲ ಡಾ.ಆರ್.ಮಹೇಶ್, ಸಿಟಿಸಿ ಕಮಿಟಿ ಸದಸ್ಯರಾದ ಜಿ.ಪ್ರೇಮ್ ಕುಮಾರ್, ಪ್ರಾಧ್ಯಾಪಕರಾದ ಜಿ.ಎಸ್ ರಾಮಪ್ಪ, ಬಸವರಾಜ್, ಜಗನ್ನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ನಗರ ಸಭಾ ಉಪಾಧ್ಯಕ್ಷರು, ಕೆಪಿಸಿಸಿ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.