ಧರ್ಮಪುರ ತಾಲೂಕು ಕೇಂದ್ರ ಆಗಲಿದೆ-ಸುಧಾಕರ್

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಧರ್ಮಪುರ ಹೋಬಳಿ ಕೇಂದ್ರಕ್ಕೆ ತಾಲೂಕು ಸ್ಥಾನಮಾನ ದೊರೆಯಲಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಶನಿವಾರ ಹಿರಿಯೂರು ನಗರದ ಹುಳಿಯಾರು ರಸ್ತೆಯಲ್ಲಿ 06 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಹಿರಿಯೂರು ಬಸ್ ಘಟಕ ಲೋಕಾರ್ಪಣೆದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಧರ್ಮಪುರ ಹೋಬಳಿ ಮುಂಬರುವ ದಿನದಲ್ಲಿ ತಾಲೂಕು ಕೇಂದ್ರ ಆಗಲಿದೆ. ಇದಕ್ಕಾಗಿ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ. ಹಿರಿಯೂರು ತಾಲ್ಲೂಕಿನ ಜನರ ಬಹುದಿನದ ಕನಸು ನನಸಾಗಿದೆ. ಈಗಾಗಲೇ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಜಾಗವನ್ನು ಗುರುತಿಸಿ ಸಾರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. 3.35 ಕೋಟಿ ವೆಚ್ಚದಲ್ಲಿ ಬಸ್ ನಿರ್ಮಾಣ ಯೋಜನೆ ರೂಪಿಸಲಾಗಿದೆ. ಇದಕ್ಕೆ ಸಾರಿಗೆ ಸಚಿವರು ತಕ್ಷಣವೇ ಮಂಜೂರಾತಿ ನೀಡುವಂತೆ ಕೋರಿದರು.

- Advertisement - 

ಹಿರಿಯೂರಿನ ಮುಖ್ಯ ರಸ್ತೆಯಿಂದ ಬಸ್ ಡಿಪೋ ಸಂಪರ್ಕಿಸುವ ರಸ್ತೆ ಕಿರಿದಾಗಿದ್ದು ಇದನ್ನು ದ್ವಿಪಥ ರಸ್ತೆಯನ್ನಾಗಿ ಸ್ಥಳೀಯ ಆಡಳಿತದಿಂದ ಅಭಿವೃದ್ಧಿ ಪಡಿಸಲಾಗುವುದು ಎಂದು ಸಚಿವ ಡಿ.ಸುಧಾಕರ ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಿ.ಟಿ. ಶ್ರೀನಿವಾಸ ಮಾತನಾಡಿ, ಬಡತನ ರೇಖೆಗಿಂತ ಕೆಳಗಿರುವ ಜನರನ್ನೂ ಒಳಗೊಂಡು ಬಡವರನ್ನು ಆರ್ಥಿಕವಾಗಿ ಸಬಲರಾಗಿಸಲು ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಬಸ್ ಘಟಕ ನಿರ್ಮಾಣವಾಗಿರುವುದರಿಂದ ಗ್ರಾಮೀಣ ಭಾಗದ ಜನರು ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಿದೆ. ತಾಲ್ಲೂಕಿನ ಮೇಟಿಕುರ್ಕಿ ಬಳಿ ಟ್ರಕ್ ಟರ್ಮಿನಲ್‍ಗೆ ಜಾಗ ಗುರುತಿಸಲಾಗಿದೆ. ಸಾರಿಗೆ ಸಚಿವರು ಟ್ರಕ್ ಟ್ರರ್ಮಿನಲ್ ನಿರ್ಮಿಸಲು ಅನುಮತಿಸಿದರೆ ಅನುಕೂಲವಾಗುತ್ತದೆ ಎಂದು ಹೇಳಿದರು.

- Advertisement - 

ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಮಾತನಾಡಿ, ಹಿರಿಯೂರು ಅತಿ ವೇಗವಾಗಿ ಬೆಳೆಯುತ್ತಿದೆ. ಎರಡು ರಾಷ್ಟ್ರೀಯ ಹೆದ್ದಾರಿಗಳು ಹಿರಿಯೂರು ನಗರದಲ್ಲಿ ಹಾದು ಹೋಗಿವೆ. ತಾಲ್ಲೂಕಿನಲ್ಲಿ ಅತಿದೊಡ್ಡ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಉದ್ದಿಮೆಗಳು ಸ್ಥಾಪನೆಯಾಗಲಿವೆ.

ಬಸ್ ಡಿಪೋ ನಿರ್ಮಾಣದಿಂದ ಹಿರಿಯೂರಿನ ಗ್ರಾಮೀಣ ಭಾಗಕ್ಕೆ ಹೆಚ್ಚಿನ ಬಸ್ ಸೌಲಭ್ಯ ದೊರತಂತಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಸಂದರ್ಭದಲ್ಲಿ ಸಚಿವ ರಾಮಲಿಂಗಾರೆಡ್ಡಿ, ಹಿರಿಯೂರು-ಧರ್ಮಸ್ಥಳ, ಹಿರಿಯೂರು-ಚಳ್ಳಕೆರೆ, ಹಿರಿಯೂರು-ಹೊಸದುರ್ಗ, ಹಿರಿಯೂರು-ಹಾಸನ, ಹಿರಿಯೂರು-ಧರ್ಮಪುರ ಮಾರ್ಗದ ನೂತನ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. 

ಕರ್ನಾಟಕ ದ್ರಾಕ್ಷರಸ ಮಂಡಳಿ ಅಧ್ಯಕ್ಷ ಡಾ.ಯೋಗಿಶ್ ಬಾಬು, ಆದಿ ಜಾಂಬವ ನಿಗಮದ ಅಧ್ಯಕ್ಷ ಮಂಜುನಾಥ, ನಗರಸಭೆ ಅಧ್ಯಕ್ಷ ಬಾಲಕೃಷ್ಣ.ಆರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್.ಶಿವಣ್ಣ, ಉಪಾಧ್ಯಕ್ಷ ಖಾದಿ ರಮೇಶ್,

ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕ ಇಬ್ರಾಹಿಂ ಮೈಗೂರ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆಕಾಶ್ ಸೇರಿದಂತೆ ಮತ್ತಿರರು ಉಪಸ್ಥಿತರಿದ್ದರು.  ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ವೆಂಕಟೇಶ ಸ್ವಾಗತಿಸಿದರು.

 

Share This Article
error: Content is protected !!
";