ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರ ಕಿಚ್ಚು ಭುಗಿಲೆದ್ದಿದೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೈತ ವಿರೋಧಿ ಕರ್ನಾಟಕ ಕಾಂಗ್ರೆಸ್
ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರ ಕಿಚ್ಚು ಭುಗಿಲೆದ್ದಿದೆ ಎಂದು ಜೆಡಿಎಸ್ ಕಿಡಿಕಾರಿದೆ.

ಸಕ್ಕರೆ ಕಾರ್ಖಾನೆ ಮಾಲೀಕರ ಲಾಬಿಗೆ ಮಣಿದು  ಕಬ್ಬಿಗೆ ವೈಜ್ಞಾನಿಕವಾಗಿ 3,500 ರೂ. ದರ ನಿಗದಿಪಡಿಸದೆ ನುಣುಚಿಕೊಂಡಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ  ಕಬ್ಬು ತುಂಬಿದ್ದ 50ಕ್ಕೂ  ಹೆಚ್ಚು ಟ್ರ್ಯಾಲಿಗಳಿಗೆ ಬೆಂಕಿ ಹಚ್ಚಿ ರೈತರು ಆಕ್ರೋಶ ಹೊರಹಾಕಿದ್ದಾರೆ.

- Advertisement - 

ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಸರ್ಕಾರದ ವಿರುದ್ಧ ರೈತರು 15 ದಿನಗಳಿಂದಲೂ ಪ್ರತಿಭಟನೆ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ಕಾರ್ಖಾನೆ ಮಾಲೀಕರು ರಿಕವರಿ ನೆಪದಲ್ಲಿ ಕಬ್ಬಿಗೆ ಸೂಕ್ತ ನಿಗದಿತ ಬೆಲೆ ಕೊಡದೆ ವಂಚಿಸುತ್ತಿದ್ದಾರೆ.

ಇದರಿಂದ ನೊಂದು ಬೆಂದಿರುವ ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಸಿಗದ ಹಿನ್ನೆಲೆ ಸಾವಿರಾರು ಟನ್ ಕಬ್ಬಿಗೆ ಬೆಂಕಿ ಹಚ್ಚಿದ್ದಾರೆ. ಈ ರೀತಿ ಕಬ್ಬಿನ ಬೆಳೆಗೆ ಬೆಂಕಿ ಹಚ್ಚುವುದು ಪರಿಹಾರದ ಕ್ರಮವಲ್ಲ. ನಮ್ಮ ರೈತರು ತಾಳ್ಮೆ ಕಳೆದುಕೊಳ್ಳಬಾರದು ಎಂದು ಜೆಡಿಎಸ್ ಮನವಿ ಮಾಡಿದೆ.

- Advertisement - 

ಅನ್ನದಾತರ ಅಹವಾಲು ಆಲಿಸದ ಕಾಂಗ್ರೆಸ್ ಸರ್ಕಾರ ಮತ್ತು ಮಂತ್ರಿಗಳು ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಎಂಬಂತೆ ವರ್ತಿಸಿದ್ದು, ಬೆಲೆ ನಿಗದಿ ವಿಚಾರದಲ್ಲಿ ಜಿಲ್ಲೆ ಜಿಲ್ಲೆಗಳ ರೈತರ ನಡುವೆಯೇ ಅಸಮಾಧಾನಕ್ಕೆ ಕಾರಣವಾಗಿದೆ. ಸರ್ಕಾರ ಕಬ್ಬು ಬೆಳೆಗಾರರಿಗೆ ಕಾರ್ಖಾನೆ ಮಾಲೀಕರಿಂದ ಸೂಕ್ತ ದರ ಸಿಗುವಂತೆ ನ್ಯಾಯ ಒದಗಿಸಿಕೊಡಬೇಕು ಎಂದು ಜೆಡಿಎಸ್ ಪಕ್ಷವು ಆಗ್ರಹಿಸಿದೆ.

 

 

 

Share This Article
error: Content is protected !!
";