ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳೆದ 26 ತಿಂಗಳುಗಳಲ್ಲಿ ತಮ್ಮದೇ ಪಕ್ಷದ ಸರ್ಕಾರದಿಂದ ನಯಾ ಪೈಸೆ ಅನುದಾನ ಪಡೆಯಲಾಗದೆ ತಮ್ಮ ಕ್ಷೇತ್ರಗಳಲ್ಲಿ ತಲೆ ಎತ್ತಿಕೊಂಡು ಓಡಾಡಲಾಗದ ಪರಿಸ್ಥಿತಿ ಎದುರಿಸುತ್ತಿದ್ದ ಕಾಂಗ್ರೆಸ್ ಶಾಸಕರು, ಸೂಪರ್ ಸಿಎಂ ಸುರ್ಜೇವಾಲಾ ಅವರ 6 ದಿನಗಳ ಸಭೆಯ ಪರಿಣಾಮದಿಂದ, ಸಿಎಂ ಸಿದ್ದರಾಮಯ್ಯ ಅವರ ಬಳಿ ತಲಾ 50 ಕೋಟಿ ರೂಪಾಯಿ ಅನುದಾನ ಗಿಟ್ಟಿಸಿಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ದೂರಿದ್ದಾರೆ.
ಸೂಪರ್ ಸಿಎಂ ಸುರ್ಜೇವಾಲಾ ಅವರೇ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡಿಸಿಕೊಟ್ಟ ತಮಗೆ ಅಭಿನಂದನೆಗಳು. ಕರ್ನಾಟಕ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರ ಕ್ಷೇತ್ರಗಳಿಗೂ ಅನುದಾನ ಕೊಡಿಸಿ ಪುಣ್ಯ ಕಟ್ಟಿಕೊಳ್ಳಿ ಸ್ವಾಮಿ ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.
ನಿಮ್ಮ ಸೂಚನೆಯ ಫಲವಾಗಿ ನಮ್ಮ ಪಕ್ಷದ ಶಾಸಕರ ಕ್ಷೇತ್ರಗಳಿಗೂ ಅನುದಾನ ಸಿಕ್ಕರೆ ತಮಗೆ ವಿಶೇಷ ಸನ್ಮಾನ ಮಾಡಿ ಅಭಿನಂದನೆ ಸಲ್ಲಿಸುತ್ತೇವೆ ಎಂದು ಅಶೋಕ್ ಕೋರಿದ್ದಾರೆ.