ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ವಿಷಯುಕ್ತ ನೀರು ಪೂರೈಕೆ-ಶಾಸಕರ ಕಿಡಿ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೂರು ಹಂತಗಳಲ್ಲಿ ಶುದ್ಧೀಕರಿಸದೆ ವಿಷಯುಕ್ತ ನೀರನ್ನು ಹರಿಸಿ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಶಾಸಕರಾದ ಸಮೃದ್ಧಿ ವಿ. ಮಂಜುನಾಥ್‌ಅವರು ವಿಧಾನಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಅಶುದ್ಧ ನೀರನ್ನು ಸಂಗ್ರಹಿಸಿದ್ದ ಬಾಟಲ್‌ಪ್ರದರ್ಶಿಸಿ, ಜಿಲ್ಲೆಯ ಜನರ ಆರೋಗ್ಯದ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿ, ಶುದ್ಧ ಕುಡಿಯುವ ನೀರಿಗಾಗಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಸರ್ಕಾರಕ್ಕೆ ಮುಳಬಾಗಿಲು ಶಾಸಕ ಸಮೃದ್ಧಿ ವಿ. ಮಂಜುನಾಥ್‌ ಆಗ್ರಹಿಸಿದರು. 

- Advertisement - 

Share This Article
error: Content is protected !!
";