ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತವನ್ನು ಸದಾ ಅಪಮಾನಿಸುವ ಅಪ್ರಬುದ್ಧ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಕಟುಶಬ್ದಗಳ ಮೂಲಕವೇ ಕಪಾಳಮೋಕ್ಷ ಮಾಡಿದೆ ಎಂದು ಜೆಡಿಎಸ್ ಟೀಕಿಸಿದೆ.
ಭಾರತದ 2000 ಚದರ ಕಿ.ಮೀ. ಭೂಪ್ರದೇಶವನ್ನು ಚೀನೀಯರು ಆಕ್ರಮಿಸಿಕೊಂಡಿದ್ದಾರೆಂದು ನಿಮಗೆ ಹೇಗೆ ತಿಳಿಯುತ್ತದೆ? ನೀವು ಅಲ್ಲಿದ್ದೀರಾ? ನಿಮ್ಮ ಬಳಿ ವಿಶ್ವಾಸಾರ್ಹ ಸಾಕ್ಷ್ಯಗಳಿವೆಯೇ? ಎಂದು ಕೋರ್ಟ್ ಪ್ರಶ್ನಿಸಿದೆ. ನೀವು ನಿಜವಾದ ಭಾರತೀಯರಾಗಿದ್ದರೆ,
ನೀವು ಹಾಗೆ ಹೇಳುತ್ತಿರಲಿಲ್ಲ ಎಂದಿರುವ ನ್ಯಾಯಾಧೀಶರು, ಭಾರತ ಮತ್ತು ಭಾರತೀಯ ಸೇನೆ ವಿರುದ್ಧ ಆಧಾರ ರಹಿತ ಸುಳ್ಳು ಆರೋಪಗಳನ್ನು ಮಾಡಿದ್ದ ರಾಹುಲ್ ಗಾಂಧಿಗೆ ಛೀಮಾರಿ ಹಾಕಿದೆ ಎಂದು ಜೆಡಿಎಸ್ ತಿಳಿಸಿದೆ.

