ಕಾಂಗ್ರೆಸ್ ಶಾಸಕ ನಂಜೇಗೌಡರ ಆಯ್ಕೆ ಎತ್ತಿಹಿಡಿದ ಸುಪ್ರೀಂ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡರ ಆಯ್ಕೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ತಮ್ಮ ಶಾಸಕ ಸ್ಥಾನ ರದ್ದು ಮಾಡಿದ್ದ ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ನಂಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಜೋಯ್​​ಮಲ್ಯ ಬಾಗ್ಚಿ ಅವರಿದ್ದ ಪೀಠ
, ನಂಜೇಗೌಡ ಅವರ ಆಯ್ಕೆಯನ್ನು ಎತ್ತಿ ಹಿಡಿದಿದೆ.

ಈ ಮೂಲಕ ಕಾಂಗ್ರೆಸ್ ಶಾಸಕರ ಆಯ್ಕೆಯನ್ನು ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್‌ನ ಸೆಪ್ಟಂಬರ್ 2025 ರ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

- Advertisement - 

ಮತಗಳ ಮರು ಎಣಿಕೆ ನಂತರವೂ ನಂಜೇಗೌಡರು ತಮ್ಮ ಎದುರಾಳಿ ಬಿಜೆಪಿ ಕೆ ಎಸ್ ಮಂಜುನಾಥ್ ಗೌಡ ಅವರಿಗಿಂತ 250ಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ ಎಂಬುದನ್ನು ಪೀಠ ಗಮನಿಸಿ ಈ ಆದೇಶ ನೀಡಿ ಆದೇಶಿಸಿದೆ.

 

- Advertisement - 

Share This Article
error: Content is protected !!
";