ಸಿದ್ದರಾಮಯ್ಯನವರ ರಾಜೀನಾಮೆಗಾಗಿ ಭೂಮಿಕೆ ಸಿದ್ಧಪಡಿಸಲು ಆಗಮಿಸಿ ಸುರ್ಜೇವಾಲಾ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಪಕ್ಷ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ, ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರ ಯಾವ ರೀತಿ ನೆಲ ಕಚ್ಚಿದೆ ಎಂಬುದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ, ಬದಲಾಗಿ ಸಿದ್ದರಾಮಯ್ಯನವರ ರಾಜೀನಾಮೆ ಪಡೆಯಲು ಭೂಮಿಕೆ ಸಿದ್ಧಪಡಿಸಲು ಕರ್ನಾಟಕಕ್ಕೆ ಬಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದರು.

ಕಾಂಗ್ರೆಸ್ ಶಾಸಕರ ಹೇಳಿಕೆಗಳನ್ನು ಗಮನಿಸಿದರೆ ಮುಖ್ಯಮಂತ್ರಿಗಳು ಆಡಳಿತದ ಮೇಲೆ ಸಂಪೂರ್ಣ ಹಿಡಿತ ಕಳೆದುಕೊಂಡಿರುವುದಷ್ಟೇ ಅಲ್ಲ ಅವರ ಪಕ್ಷದ ಶಾಸಕರ ವಿಶ್ವಾಸವನ್ನೂ ಕಳೆದುಕೊಂಡಿದ್ದಾರೆ. ಕುದುರೆ ವ್ಯಾಪಾರ ಆರಂಭವಾಗಿದೆ, ಈ ಕುದುರೆ ವ್ಯಾಪಾರದ ಬಗ್ಗೆ ಗೌರವಾನ್ವಿತ ರಾಜ್ಯಪಾಲರು ಗಮನಿಸಬೇಕೆಂದು ವಿಜಯೇಂದ್ರ ವಿನಂತಿ ಮಾಡಿದರು.

- Advertisement - 

ಸಿದ್ದರಾಮಯ್ಯನವರು ಜನಪ್ರಿಯ ಮುಖ್ಯಮಂತ್ರಿಗಳಲ್ಲ, ಲಾಟರಿ ಮುಖ್ಯಮಂತ್ರಿಗಳು ಎಂದು ರಾಜ್ಯದ ಜನತೆಗೆ ಅರ್ಥವಾಗಿದೆ. ಅದನ್ನು ಸ್ವತಃ ಕರ್ನಾಟಕ ಕಾಂಗ್ರೆಸ್ ಪಕ್ಷದ ಶಾಸಕ ಬಿ.ಆರ್.ಪಾಟೀಲ್ ಅವರೇ ಹೇಳಿದ್ದಾರೆ. ಲಾಟರಿ ಯಿಂದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನವನ್ನು ಗಿಟ್ಟಿಸಿಕೊಂಡಿರುವ ಅವರಿಂದ

ರಾಜ್ಯದ ಅಭಿವೃದ್ಧಿಯಾಗಲು ಸಾದ್ಯವೇ ಇಲ್ಲ, ಇದನ್ನು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರೂ ಸಹ ಹೇಳಿದ್ದಾರೆ. ರಾಜ್ಯದ ಆಡಳಿತ ಯಂತ್ರ ಸಂಪೂರ್ಣ ಕುಸಿದು ಬಿದ್ದಿದ್ದು ಭ್ರಷ್ಟಾಚಾರದಲ್ಲಿ ಸಂಪೂರ್ಣ ಮುಳುಗಿದೆ ಎಂದು ವಿಜಯೇಂದ್ರ ಟೀಕಾಪ್ರಹಾರ ಮಾಡಿದರು.

- Advertisement - 

 

 

Share This Article
error: Content is protected !!
";