ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡಿನ ಜನತೆಗೆ ನನ್ನ ನಮಸ್ಕಾರ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದಲ್ಲಿರುವ ಪ್ರತಿಯೊಂದು ಮನೆಗೂ ಭೇಟಿ ನೀಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಸಮೀಕ್ಷೆಯಿಂದ ಯಾವ ಮನೆಯೂ ಹೊರಗೆ ಉಳಿಯಬಾರದು ಎಂಬ ಉದ್ದೇಶದಿಂದ ವಿದ್ಯುತ್ ಸಂಪರ್ಕವಿರುವ ಮನೆಗಳ ಆರ್.ಆರ್. ಮೀಟರ್ ಆಧಾರದ ಮೇಲೆ ಮನೆಗಳನ್ನು ಗುರುತಿಸಿ, ಸಮೀಕ್ಷೆ ನಡೆಸಲಾಗುತ್ತಿದೆ.
ಎಲ್ಲಾ ವರ್ಗದ ಜನರ ಕಲ್ಯಾಣಕ್ಕೆ ಶ್ರಮಿಸಲು ಈ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, ಸಮೀಕ್ಷೆ ವೇಳೆ ಪ್ರತಿಯೊಬ್ಬರು ಸಹಕಾರ ನೀಡುವ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಶಿವಕುಮಾರ್ ತಮ್ಮಲ್ಲಿ ಮನವಿ ಮಾಡಿಕೊಂಡಿದ್ದಾರೆ.

