ಅ.29 ಮತ್ತು 30ರಂದು ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಗಳ ಸಮೀಕ್ಷೆ

News Desk

ಚಂದ್ರವಳ್ಳಿ ನ್ಯೂಸ್, ಹೊಳಲ್ಕೆರೆ:
ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ವತಿಯಿಂದ ಹೊಳಲ್ಕೆರೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಇದೇ ಅಕ್ಟೋಬರ್ 29 ಮತ್ತು 30ರಂದು ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ಸಮೀಕ್ಷೆಯನ್ನು ಪುನರ್ ನಿಗಧಿಪಡಿಸಲಾಗಿದೆ.

The prohibition of Employment as Manual Scavengers and Their Rehabilitation Act, 2013 14 ಅನ್ವಯ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ಸಮೀಕ್ಷೆಯನ್ನು 2024 .8 ಮತ್ತು 9ರಂದು ಸಮೀಕ್ಷಾ ಕ್ಯಾಂಪ್ಗಳನ್ನು ಹಮ್ಮಿಕೊಂಡಿರುವ ಕುರಿತು ಪತ್ರಿಕೆಗಳಲ್ಲಿ ಪ್ರಕಟಣೆ ಹೊರಡಿಸಲಾಗಿತ್ತು.

ಆದರೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು .4  ರಿಂದ ರಾಜ್ಯಾದ್ಯಂತ ಮುಷ್ಕರದಲ್ಲಿ ಭಾಗಿಯಾದ ಕಾರಣ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.

ಪ್ರಯುಕ್ತ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ಸಮೀಕ್ಷೆಯನ್ನು ಇದೇ .29 ಹಾಗೂ 30ರಂದು ಪುನರ್ ನಿಗಧಿಪಡಿಸಿದ್ದು, ಸ್ವಯಂ ಘೋಷಿತ ಅರ್ಜಿಗಳನ್ನು ಪಡೆದು ಮುಂದಿನ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹೊಳಲ್ಕೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

 

- Advertisement -  - Advertisement - 
Share This Article
error: Content is protected !!
";