ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆಂದು ಅನುಮಾನಗೊಂಡ ಪತಿ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಹಿರಿಯೂರು ನಗರದ ತೇರುಮಲ್ಲೇಶ್ವರ ದೇವಾಲಯದ ಬಳಿ ನಡೆದಿದೆ.
ನಗರಸಭೆ ಬಿಲ್ ಕಲೆಕ್ಟರ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಮಲ್ಲಿಕಾರ್ಜುನಸ್ವಾಮಿ ಎಂಬಾತನು ಮಾಲತೇಶ್ ಎಂಬುವರ ಪತ್ನಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದ್ದು ಇದರಿಂದ ಕೋಪಗೊಂಡ ಪತಿ ಮಾಲತೇಶ್ ಭಾನುವಾರ ಮಲ್ಲಿಕಾರ್ಜುನನ ಮೇಲೆ ಏಕಾಏಕಿ ದಾಳಿ ನಡೆಸಿ ಬೆನ್ನು ಹಾಗೂ ಎಡ ಭುಜಕ್ಕೆ ಚಾಕುವಿನಿಂದ ಚುಚ್ಚಿದ್ದಾನೆ.
ಗಾಯಗೊಂಡ ಮಲ್ಲಿಕಾರ್ಜುನನನ್ನು ಸ್ಥಳೀಯರು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆರೋಪಿ ಮಾಲತೇಶ್ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.