ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಉಚ್ಚನ್ಯಾಯಾಲಯ ಹಾಗೂ ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ಸಹಯೋಗದೊಂದಿಗೆ ನ್ಯಾಯಾಂಗ ಅಕಾಡೆಮಿಯ ಆಡಿಟೋರಿಯಂನಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ನ್ಯಾಯಾಂಗ ಅಕಾಡೆಮಿಯ 25ನೇ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾರತದ ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ವಿ.ಎನ್.ಭಾಟಿ ಅವರು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಉಚ್ಛ ನ್ಯಾಯಮೂರ್ತಿಗಳಾದ ಶ್ರೀಮತಿ ಅನು ಶಿವರಾಮನ್, ಎನ್.ವಿ.ಅಂಜಾರಿಯಾ, ನಿವೃತ್ತ ನ್ಯಾಧೀಶರುಗಳು, ವಕೀಲರುಗಳು, ಕರ್ನಾಟಕ ನ್ಯಾಯಾಂಗ ಅಕಾಡೆಮಿಯ ನಿರ್ದೇಶಕಿ ಹೆಚ್.ಆರ್.ರಾಧಾ, ಕಾನೂನು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.