ಪಂಚಾಯ್ತಿ ವ್ಯಾಪ್ತಿಯಲ್ಲಿ ಸ್ವಚ್ಛತ ಹಿ ಸೇವಾ ಕಾರ್ಯಕ್ರಮ
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ಯಾಲಮ್ಮ ದೇವಸ್ಥಾನದ ಹತ್ತಿರ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮವನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಎನ್.ಅನುರಾಧ ಉದ್ಘಾಟನೆ ಮಾಡಿದರು.
ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ಭಾಗವಾಗಿ ವೇದಿಕೆ ಕಾರ್ಯಕ್ರಮ, ಜಾಥಾ ಕಾರ್ಯಕ್ರಮ, ಸಸಿಗಳ ನೆಡುವಿಕೆ ಹಾಗೂ ಶ್ರಮದಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ ಮಾತನಾಡಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಬರುವ ಗ್ರಾಮೀಣ ಮತ್ತು ನಗರ ಪ್ರದೇಶಗಳ ಜನರಲ್ಲಿ ನೈರ್ಮಲ್ಯ ಮತ್ತು ಸ್ವಚ್ಛತೆಯನ್ನು ಕಾಪಾಡುವುದು ಮತ್ತು ಈ ಕುರಿತು ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಸ್ವಚ್ಚತಾ ಹೀ ಸೇವಾ ಆಂದೋಲನವನ್ನು ಸೆಪ್ಟೆಂಬರ್, 17, 2024 ರಿಂದ ಅಕ್ಟೋಬರ್, 2, 2024 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಉಪ ಕಾರ್ಯದರ್ಶಿ ಟಿ. ಕೆ. ರಮೇಶ್ ಮಾತನಾಡಿ ಸರ್ಕಾರಿಕಛೇರಿ ಆವರಣ, ರಾಷ್ಟ್ರೀಯ ಹೆದ್ದಾರಿ, ರೈಲು ನಿಲ್ದಾಣ ,ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕರ ಸ್ಥಳ, ದೇವಸ್ಥಾನ, ಮಾರುಕಟ್ಟೆ, ಕಲ್ಯಾಣಿ, ಕೆರೆ, ಕುಂಟೆ, ಬಸ್ ನಿಲ್ದಾಣ, ಮುಖ್ಯ ರಸ್ತೆ ,ಹಾಗೂ ಶಾಲಾ ಕಾಲೇಜು ಆವರಣ ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಬೇಕು ಹಾಗೂ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ಇರುವ ಬ್ಲಾಕ್ ಸ್ಪಾಟ್ಸ್ Block spots ಕಸ ರಾಶಿಗಳನ್ನು ತೆರವು ಗೊಳಿಸಿ ಆ ಜಾಗದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಆ ಜಾಗವನ್ನು ಸ್ವಚ್ಛ ಸುಂದರವಾಗಿ ಮಾರ್ಪಾಡು ಮಾಡಬೇಕು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸ್ವಚ್ಚತೆ ಬ್ಗಗೆ ಹರಿವು ಮೂಡಿಸಲು ಪ್ರಬಂಧ ಸ್ಪರ್ಧೆ ಚಿತ್ರಕಲಾ ಚಿತ್ರಕಲಾ ಸ್ಪರ್ಧೆ ಆಯೋಜಿಸಬೇಕು ಎಂದು ತಿಳಿಸಿದರು.
ಕಾರ್ಯನಿರ್ವಾಹಕ ಅಧಿಕಾರಿ ಎನ್ ಮುನಿರಾಜು ಪ್ರಾಸ್ತಾವಿಕ ಭಾಷಣ ಮಾಡಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಪ್ರತಿ ವರ್ಷವು ಸ್ವಚ್ಚತಾ ಹೀ ಸೇವಾ ಪಾಕ್ಷಿಕವನ್ನು ಆಯೋಜಿಸಲಾಗುತ್ತಿದೆ. ಈ ವರ್ಷವು ಸಹ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲಶಕ್ತಿ ಮಂತ್ರಾಲಯವು ಹಾಗೂ ಕೇಂದ್ರ ನಗರದ ವಸತಿ ವ್ಯವಹಾರಗಳ ಸಚಿವಾಲಯವು 17ನೇ ಸೆಪ್ಟಂಬರ್2024 ರಿಂದ 2ನೇ ಅಕ್ಟೋಬರ್2024ರ ವರೆಗೆ ಸ್ವಚ್ಚತಾ ಹೀ ಸೇವಾ ಪಾಕ್ಷಿಕದ-2024 ವನ್ನು ಹಮ್ಮಿಕೊಳ್ಳಲಾಗುತ್ತಿದ್ದು ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಲು ಪ್ರತಿ ವರ್ಷ ಅಕ್ಟೋಬರ್2 ಅನ್ನು ಸ್ವಚ್ಚ ಭಾರತ ದಿನವನ್ನಾಗಿ ಆಚರಿಸಲಾಗುತ್ತದೆ ಮುಂಚೂಣಿಯಾಗಿ ಸ್ವಯಂ ಪ್ರೇರಣೆ ಮತ್ತು ಸಾಮೂಹಿಕ ಕ್ರಮವನ್ನು ಬಲಪಡಿಸಲು 2017 ರಿಂದ ಈ ಸ್ವಚ್ಚತಾ ಹೀ ಸೇವಾ (SHS-2024) ಪಾಕ್ಷಿಕ ಆಂದೋಲನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸ್ವಚ್ಛತಾಗಾರರ ಸೇವೆಯನ್ನು ಪರಿಗಣಿಸಿ ಸ್ವಚ್ಛತಾಗಾರರಾದ ಕೊಡಿಗೇಹಳ್ಳಿ ಗ್ರಾ.ಪಂ.ಯ ಶಿವಕುಮಾರ್ ಮತ್ತು ದರ್ಗಾಜೋಗಹಳ್ಳಿ ಗ್ರಾ.ಪಂ.ಯ ಸೌಜನ್ಯ ರವರನ್ನು ಸನ್ಮಾನಿಸಲಾಯಿತು.
ಜಿ.ಪಂ. ಯೋಜನಾ ನಿರ್ದೇಶಕರಾದ ಶ್ರೀ ವಿಠ್ಠಲ್ ಕಾವಳೇ ರವರು, ತಾಲ್ಲೂಕು ಮಟ್ಟದ ಅಧಿಕಾರಿಗಳು, SBM ಸಿಬ್ಬಂದಿ, NRLM ಸಿಬ್ಬಂದಿ, RL ಜಾಲಪ್ಪ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನಾಗರಾಜುರವರು, NSS ವಿದ್ಯಾರ್ಥಿಗಳು,ದರ್ಗಾಜೋಗಹಳ್ಳಿ ಮತ್ತು ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.