ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಶ್ರೀರಾಮಕೃಷ್ಣ ಪರಮಹಂಸರ ಹದಿನಾರು ಮಂದಿ ನೇರ ಸಂನ್ಯಾಸಿ ಶಿಷ್ಯರಲ್ಲಿ ಒಬ್ಬರಾದ ಸ್ವಾಮಿ ಅಖಂಡಾನಂದರ ಸೇವೆಯ ಆದರ್ಶ ಇಂದಿನ ಯುವಜನತೆಗೆ ಆದರ್ಶಪ್ರಾಯವಾಗ ಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕಿ ಡಾ.ಭೂಮಿಕಾ ಸಲಹೆ ನೀಡಿದರು.
ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಯುವಕ-ಯುವತಿಯರಿಗಾಗಿ ಆಯೋಜಿಸಿದ್ದ ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು “ಸ್ವಾಮಿ ಅಖಂಡಾನಂದರ ಸೇವೆ”ಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಆರಂಭದಲ್ಲಿ ಪ್ರಾರ್ಥನೆ ಮತ್ತು ಭಜನೆಯನ್ನು ಯತೀಶ್ ಎಂ ಸಿದ್ದಾಪುರ ನಡೆಸಿಕೊಟ್ಟರೆ ಪೂಜ್ಯ ಮಾತಾಜೀ ತ್ಯಾಗಮಯೀ ಅವರಿಂದ ದಿವ್ಯತ್ರಯರಿಗೆ ಮಂಗಳಾರತಿ, ಸಂನ್ಯಾಸಿ ಗೀತೆಯ ಗಾಯನ ನಡೆಯಿತು.
ತರಗತಿಯಲ್ಲಿ ಜಿ ಯಶೋಧಾ ಪ್ರಕಾಶ್, ಸಂತೋಷ್ , ಹೃತಿಕ್,ಸಂಜನಾ, ದಾನೇಶ್ವರಿ, ಪುಷ್ಪಲತಾ , ಮಾನ್ಯ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

