ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಸ್ವಾಮಿ ವಿವೇಕಾನಂದರ 162ನೇ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯ ಆಚರಣೆ ಮಾಡಲಾಯಿತು.
ಹಿರಿಯೂರು ತಾಲೂಕಿನ ಹೊಸಯಳನಾಡು ಗ್ರಾಮದ ಸ್ವಾಮಿವಿವೇಕಾನಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗದ ಬಾಲಕರ ವಸತಿನಿಲಯದಲ್ಲಿ ಸ್ವಾಮಿ ವಿವೇಕಾನಂದರ 162ನೇ ಜನ್ಮದಿನ ಮತ್ತು ರಾಷ್ಟ್ರೀಯ ಯುವ ದಿನಾಚರಣೆಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾಡನಾಯಕನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಲಲಿತ ತಂಗರಾಜು ಇವರು ಮಾತನಾಡಿ ಸ್ವಾಮಿ ವಿವೇಕಾನಂದರ ಜೀವನ ಮತ್ತು ಅವರ ಆದರ್ಶಗಳು ಪ್ರಸ್ತುತ ದಿನಕ್ಕೆ ಯಾವ ರೀತಿ ಉಪಯುಕ್ತ ಎಂದು ತಿಳಿಸಿಕೊಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೇವತಿ ವಿಮಲಾಶೇಖರ್ ಮಾತನಾಡಿ ಸ್ವಾಮಿ ವಿವೇಕಾನಂದರ ಬಾಲ್ಯ ಮತ್ತು ಪ್ರಸ್ತುತ ಮಕ್ಕಳಿಗೆ ಏಕಾಗ್ರತೆ, ಶಿಸ್ತು, ಪ್ರಶ್ನೆ ಮಾಡುವುದು, ವಿದ್ಯಾರ್ಥಿಗಳ ಗುರಿ ಮತ್ತು ದೇಶಕ್ಕೆ ವಿದ್ಯಾರ್ಥಿಗಳ ಕೊಡುಗೆ ಯನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದ ಕ್ರೀಡಾ ಮತ್ತು ಸಂಸ್ಕೃತಿಕ ಸಂಘದ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.