ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ನಗರದ ಹೇಮಾವತಿ ಪೇಟೆಯಲ್ಲಿ ನಗರಸಭೆ ನಿಧಿ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಸ್ವಾಮಿ ವಿವೇಕಾನಂದ ಪುತ್ಥಳಿಯನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಆಯುಕ್ತ ಕಾರ್ತಿಕ್ ಈಶ್ವರ್, ನಗರಸಭಾ ಅಧ್ಯಕ್ಷೆ ಸುಮಿತ್ರ ಆನಂದ್, ಉಪಾಧ್ಯಕ್ಷ ಮಲ್ಲೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ರವಿಕುಮಾರ್, ನಗರಸಭಾ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.