ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರಿನ ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್‌ಹಾಗೂ ದೆಹಲಿ ಕರ್ನಾಟಕ ಸಂಘ ಹಮ್ಮಿಕೊಂಡಿದ್ದ ‘ರಾಷ್ಟ್ರಕವಿ ಕುವೆಂಪು ಅವರ ಕೊಡುಗೆ ಮತ್ತು ಸಾಧನೆ‘ ಕುರಿತ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಮೈಸೂರಿನ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಶ್ರೀ ಮುಕ್ತಿದಾನಂದ ಜೀ ಮಹಜಾಜ್, ಸ್ಫಟಿಕಪುರಿ ಮಹಾ ಸಂಸ್ಥಾನದ ಜಗದ್ಗುರು ಶ್ರೀ ನಂಜಾವಧೂತ ಮಹಾಸ್ವಾಮೀಜಿ,
ಮಾದಾರ ಚೆನ್ನಯ್ಯ ಗುರುಪೀಠದ ಜಗದ್ಗುರು ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಮಹಾಸ್ವಾಮೀಜಿ, ಬೇಲಿಮಠದ ಜಗದ್ಗುರು ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಜಗದ್ಗರು ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮೀಜಿಗಳವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ರಾಜ್ಯದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಂಸದ ಡಾ. ಸಿ.ಎನ್.ಮಂಜುನಾಥ್, ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ಎಂ. ನಾಗರಾಜ್, ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್‌ಅಧ್ಯಕ್ಷ ಹೆಚ್.ಕೆ. ರಾಮು ಸೇರಿ ಅನೇಕ ಅನೇಕರು ಈ ಸುಂದರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

