ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ:ಶಾಸಕ ಟಿ.ರಘುಮೂರ್ತಿ

News Desk

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ವಿದ್ಯಾರ್ಥಿಗಳ ಕ್ರಿಯಾಶೀಲತೆ ಹೆಚ್ಚಿಸುವಲ್ಲಿ ಪ್ರತಿಭಾಕಾರಂಜಿ ಉತ್ತಮ ಕಾರ್ಯಕ್ರಮವೆಂದು ಶಾಸಕ
, ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ.ರಘುಮೂರ್ತಿ ತಿಳಿಸಿದರು.

ಅವರು, ನಗರದ ಸ್ವಾಮವಿವೇಕಾನಂದ ಪ್ರೌಢಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ೨೦೨೪-೨೫ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಪ್ರತಿಭಾಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ,

ಅದರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣ ಇಲಾಖೆ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ಉತ್ತಮ ಮಾರ್ಗದರ್ಶನ ಮಾಡಬೇಕೆಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ತಾಲ್ಲೂಕು ಮಟ್ಟದ ಈ ಕಾರ್ಯಕ್ರಮದಲ್ಲಿ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ಪಾಲ್ಗೊಂಡಿದ್ಧಾರೆ. ಒಟ್ಟು ೧೩ ವಿಭಾಗದಲ್ಲಿ ವಿವಿಧ  ಸ್ಪರ್ಧೆ ಏರ್ಪಡಿಸಿದೆ. ೧೩೫ ಶಿಕ್ಷಕರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ಧಾರೆ. ಶಾಸಕರ ಸೂಚನೆಯಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಉತ್ತಮ ಫಲಿತಾಂಶಕ್ಕೆ ಪಾಸಿಂಗ್ ಮತ್ತು ಸ್ಪೇರಿಂಗ್ ಪ್ಯಾಕೇಜ್ ಪುಸ್ತಕವನ್ನು ಸಿದ್ದಪಡಿಸಿದೆ ಎಂದರು.

ನಗರಸಭಾ ಅಧ್ಯಕ್ಷೆ ಜೈತುಂಬಿ, ಉಪಾಧ್ಯಕ್ಷೆ ಒ.ಸುಜಾತ, ಸದಸ್ಯರಾದ ಸಿ.ಕವಿತಾ, ಸುಮಭರಮಯ್ಯ, ಎಂ.ಜೆ.ರಾಘವೇಂದ್ರ, ಬಿ.ಟಿ.ರಮೇಶ್‌ಗೌಡ, ಕೆ.ವೀರಭದ್ರಪ್ಪ, ಚಳ್ಳಕೆರೆಯಪ್ಪ, ಸುಮಕ್ಕ, ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆತಿಪ್ಫೇಸ್ವಾಮಿ, ನಾಮಿನಿ ಸದಸ್ಯ ಆರ್.ವೀರಭದ್ರಪ್ಪ, ಕೆ.ಎಂ.ನಟರಾಜ್, ಬಡಗಿಪಾಪಣ್ಣ, ದೈಹಿಕ ಶಿಕ್ಷಣ ಪರಿವೀಕ್ಷಕ ಸುನೀಲ್‌ನಾಯ್ಕ, ಜಿ.ಟಿ.ಮಂಜುನಾಥಸ್ವಾಮಿ, ಪಿ.ಮಾರುತಿಭಂಡಾರಿ ಮುಂತಾದವರು ಉಪಸ್ಥಿತರಿದ್ದರು.

 

- Advertisement -  - Advertisement -  - Advertisement - 
Share This Article
error: Content is protected !!
";