ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದ ಲಾವಣ್ಯ ವಿದ್ಯಾ ಸಂಸ್ಥೆಯಲ್ಲಿ    2024-25 ನೇ ಸಾಲಿನಲ್ಲಿ ಅತಿಹೆಚ್ಚು ಅಂಕ ಪಡೆದ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನೂತನ ವಿದ್ಯಾರ್ಥಿಗಳ ಪ್ರತಿಬಾನ್ವೇಷಣೆ  ಕಾರ್ಯಕ್ರಮ ನಡೆಯಿತು. 

ಕಾರ್ಯಕ್ರಮ ಉದ್ಘಾಟಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನಗದು ಬಹುಮಾನ ವಿತರಿಸಿ ಮಾತನಾಡಿದ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಡಾ.ನವೀನ್ ಕುಮಾರ್ ಎಂ ಬಿ ರವರು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ವಿಶ್ವಾಸ ಮಾನಸಿಕ ಸ್ಥೈರ್ಯ ಬಹಳ ಮುಖ್ಯ ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಅದರಲ್ಲೂ ಟೀನೇಜ್ ಮಕ್ಕಳು ಕುರುಡು ಆಕರ್ಷಣೆಗೆ ಒಳಗಾಗಿ ತಮ್ಮ ಜೀವನವನ್ನು ಅದರಲ್ಲೂ ವಿದ್ಯಾವಂತ ರು ಜೀವನ ಹಾಳುಮಾಡಿ ಕೊಳ್ಳುತ್ತಿದ್ದಾರೆ. 

- Advertisement - 

16 ರಿಂದ 18ನೇ ವಯಸ್ಸಿನಲ್ಲಿ ಪ್ರೀತಿ ಪ್ರೇಮ ಪ್ರಣಯ ಎಂದು ಆಕರ್ಷಣೆಗೆ ಒಳಗಾಗಿ ತಮ್ಮ ಪೋಷಕರಿಗೆ ಗುರುಗಳಿಗೆ ಮೋಸ ಮಾಡುತ್ತಿರುವುದು ತುಂಬಾ ವಿಷಾದದ ಸಂಗತಿ. ನಾನು ಮಹಿಳಾ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಇಂತಹ ನೂರಾರು ಪೋಸ್ಕೊ ಪ್ರಕರಣ ದಾಖಲಾಗುತ್ತಿರುವುದನ್ನು ಗಮನಿಸಿದರೆ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕಾನೂನು ಅರಿವು ನೈತಿಕ ಶಿಕ್ಷಣ ಬಹಳ ಮುಖ್ಯ.

ಇದರಿಂದ ಪ್ರೌಢಾವಸ್ಥೆಯ ವಿದ್ಯಾರ್ಥಿಗಳು ದಾರಿ ತಪ್ಪದಂತೆ ತಡೆಯಬಹುದಾಗಿದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರೀತಿ ಪ್ರೇಮ ಪ್ರಣಯ ಮಾದಕ ವಸ್ತುಗಳ ಬಳಕೆಗೆ ಒಳಗಾಗುತ್ತಿರುವುದು ತುಂಬಾ ವಿಷಾದದ ಸಂಗತಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

- Advertisement - 

   ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿ ಮಾತನಾಡಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಅರಕ್ಷಕ ನಿರೀಕ್ಷಕರಾದ ಸಾದಿಕ್ ಪಾಷಾ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಶೈಕ್ಷಣಿಕ ಸ್ಥಿರತೆ ಆರ್ಥಿಕ ಪ್ರಜ್ಞೆ ಬಹುಳ ಮುಖ್ಯ ಯುವ ಜನಾಂಗಕ್ಕೆ ಇಂದು ಅನೇಕ ಅವಕಾಶಗಳು ಹುಡುಕಿಕೊಂಡು ಬರುತ್ತವೆ. ಅದರಲ್ಲಿ ಉತ್ತಮ ಕ್ಷೇತ್ರದ ಆಯ್ಕೆ ಬಹಳ ಮುಖ್ಯ ಎಂದು ಹೇಳಿದರು.

     ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ವಿಶ್ವಾಸ್ ಹನುಮಂತೇಗೌಡ ರವರು ಪ್ರತಿ ವರ್ಷ ನಮ್ಮ ವಿದ್ಯಾಸಂಸ್ಥೆಯ ವತಿಯಿಂದ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವಂತೆ ಪ್ರಶಸ್ತಿ ಪತ್ರ ಪದಕದ ಜೊತೆಗೆ ನಗದು ಬಹುಮಾನವನ್ನು ಸಹ ನೀಡಲಾಗುವುದು ಇದರಿಂದ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗುತ್ತದೆ. ಇದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಹೆಚ್ಚಾಗುತ್ತದೆ ಎಂದು ಹೇಳಿದರು.

     ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟೇಲ್ ಮಾತನಾಡುತ್ತಾ ವಿದ್ಯಾರ್ಥಿಗಳು ಧಾರ್ಮಿಕ ಅಂದತ್ವ ಬಿಟ್ಟು ಪ್ರಗತಿಪರ ಚಿಂತನೆಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ಕರೆನೀಡಿದರು.

     ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜು ಮತ್ತು ಪದವಿ ಕಾಲೇಜು ಪ್ರಾಂಶುಪಾಲ “ಎಂ ಸಿ ಮಂಜುನಾಥ್” ಬಿಎಡ್ ಕಾಲೇಜು ಪ್ರಾಂಶುಪಾಲ ಪ್ರೊ ಜಿ ಕೃಷ್ಣಮೂರ್ತಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು ಬೋಧಕೇತರ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

 

Share This Article
error: Content is protected !!
";