ರಾಜ್ಯದ ರೈಲ್ವೆ ಯೋಜನೆಗಳ ಕುರಿತು ಮಾತನಾಡಿದ ಹೆಚ್.ಡಿ ದೇವೇಗೌಡ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೈಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿ ಮಾಜಿ ಪ್ರಧಾನಮಂತ್ರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡ  ಅವರು ರಾಜ್ಯಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಅಂದು ಮೈಸೂರು ಮಹಾರಾಜರ ಆ‍ಳ್ವಿಕೆ ವೇಳೆ ಮೈಸೂರು – ಹರಿಹರವರೆಗೂ ಮೀಟರ್‌ಗೇಜ್‌ರೈಲ್ವೆ ಮಾರ್ಗ ನಿರ್ಮಿಸಿದ್ದನ್ನು ಸ್ಮರಿಸಿದ ದೇವೇಗೌಡರು, ಆಗಿನ ತಮ್ಮ ರೈಲು ಪ್ರಯಾಣದ ಅನುಭವವನ್ನು ನೆನೆದರು.

ಈಗ ಬಾಂಬೆ- ಚೆನ್ನೈ ರೈಲು ಮಾರ್ಗವೂ ಹರಿಹರ-ದಾವಣಗೆರೆ-ಶೃಂಗೇರಿ-ಬೇಲೂರು ಮೂಲಕ ಚನ್ನೈಗೆ ಹಾದು ಹೋಗುತ್ತಿದ್ದು ಜನರಿಗೆ ಸಾಕಷ್ಟು ಅನುಕೂಲವಾಗುತ್ತಿದೆ. ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ ನಿರೀಕ್ಷೆಗೂ ಮೀರಿ ರೈಲ್ವೆ ಜಾಲ ಮತ್ತು ಮಾರ್ಗಗಳು ಸಾಕಷ್ಟು ಪ್ರಗತಿ ಸಾಧಿಸಿದೆ. ಈ ವಿಚಾರವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಅಭಿನಂದನೆ ಸಲ್ಲಿಸಿದರು.

 

- Advertisement -  - Advertisement - 
Share This Article
error: Content is protected !!
";