ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶಾಲಾ ಶಿಕ್ಷಣ ಇಲಾಖೆ, ತಾಲ್ಲೂಕು ಪಂಚಾಯತ್ ಮತ್ತು ವಿವಿಧ ಕ್ರೀಡಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ ಸಾಲಿಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗಿದ್ದು, ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಎಲ್ಲಾ ವಯೋಮಾನದವರು ಭಾಗವಹಿಸಬಹುದಾಗಿದೆ.
ಆ.16ರಂದು ಬೆಳಿಗ್ಗೆ 9ಕ್ಕೆ ಹಿರಿಯೂರು ತಾಲ್ಲೂಕು ಕ್ರೀಡಾಂಗಣದಲ್ಲಿ ಹಿರಿಯೂರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ, ಆ.17ರಂದು ಬೆಳಿಗ್ಗೆ 9ಕ್ಕೆ ಹೊಳಲ್ಕೆರೆಯ ರಾಮಗಿರಿ ಎಸ್‍ಜೆಎಂ ಪ್ರೌಢಶಾಲೆಯಲ್ಲಿ ಹೊಳಲ್ಕೆರೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ,
ಚಳ್ಳಕೆರೆ ತಾಲ್ಲೂಕು ಪರಶುರಾಂಪುರ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಚಳ್ಳಕೆರೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ, ಆ.23ರಂದು ಬೆಳಿಗ್ಗೆ 9ಕ್ಕೆ ಹೊಸದುರ್ಗ ತಾಲ್ಲೂಕು ಕ್ರೀಡಾಂಗಣದಲ್ಲಿ ಹೊಸದುರ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ, ಆ.24ರಂದು ಚಿತ್ರದುರ್ಗ ನಗರದ ವೀರವನಿತೆ ಒನಕೆ ಒಬವ್ವ ಕ್ರೀಡಾಂಗಣದಲ್ಲಿ ಚಿತ್ರದುರ್ಗ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ,
ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣ ಹಾಗೂ ಬಸವೇಶ್ವರ ಪ್ರೌಢಶಾಲಾ ಆವರಣದಲ್ಲಿ ಮೊಳಕಾಲ್ಮುರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದೆ. ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಖೋಖೋ, ಕಬಡ್ಡಿ, ಫುಟ್‍ಬಾಲ್, ಥ್ರೋಬಾಲ್, ಯೋಗಾಸನ ಕ್ರೀಡೆಗಳು ನಡೆಯಲಿವೆ.
ಪುರುಷರಿಗೆ ಅಥ್ಲೆಟಿಕ್ಸ್ ಸ್ಪರ್ಧೆಗಳು : 100ಮೀ, 200ಮೀ, 400ಮೀ, 800ಮೀ, 1500ಮೀ, 5000ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 4*100 ಮೀ. ರಿಲೇ, 4*400 ಮೀ. ರಿಲೇ ಕ್ರೀಡೆಗಳು ಇರಲಿವೆ.
ಮಹಿಳೆಯರಿಗೆ ಅಥ್ಲೆಟಿಕ್ಸ್ ಸ್ಪರ್ಧೆಗಳು : 100ಮೀ, 200ಮೀ, 400ಮೀ, 800ಮೀ, 1500ಮೀ, 3000ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ತ್ರಿವಿಧ ಜಿಗಿತ, ಗುಂಡು ಎಸೆತ, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 4*100 ಮೀ ರಿಲೇ, 4*100 ಮೀ.ರಿಲೇ ಕ್ರೀಡೆಗಳು ಇರಲಿವೆ.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದೂರವಾಣಿ ಸಂಖ್ಯೆ 08194-235635 ಹಾಗೂ ವಾಲಿಬಾಲ್ ತರಬೇತುದಾರ ಮಹಮ್ಮದ್ ಮುಹೀಬುಲ್ಲಾ ಅವರ ದೂರವಾಣಿ ಸಂಖ್ಯೆ 9611673475 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

