ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ತಾಲೂಕಿನ ತಮಟಗಲ್ಲು ಗ್ರಾಮದಲ್ಲಿ ನಡೆದ ಶ್ರೀ ಆಂಜನೇಯಸ್ವಾಮಿ ರಥೋತ್ಸವದ ಕಾರ್ಯಕ್ರಮದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರು ಕುಟುಂಬ ಸಮೇತರಾಗಿ ಪಾಲ್ಗೊಂಡು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಶಾಸಕರ ಪತ್ನಿ ಗಾಯಿತ್ರಿ ರಘುಮೂರ್ತಿ, ಮುಖಂಡ ಜಿ.ಆರ್.ಸತ್ಯನಾರಾಯಣ ಮತ್ತು ಸ್ಥಳೀಯ ಮುಖಂಡರು ಇದ್ದರು.


