ಚಂದ್ರವಳ್ಳಿ ನ್ಯೂಸ್, ಚೆನ್ನೈ:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬುಧವಾರ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಿರುವ ಸಂದರ್ಭದಲ್ಲೇ ರಾಜಕೀಯ ಪಕ್ಷ ಒಂದರ ಮುಖಂಡ ನಿರ್ಮೂಲನೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕ ಜಯಪಾಲನ್ ಪ್ರಧಾನಿ ಮೋದಿ ನಿರ್ಮೂಲನೆ ಮಾಡುವುದಾಗಿ ವಿವಾದಾತ್ಮನಕ ಹೇಳಿಕೆ ನೀಡಿರುವ ವಿಡಿಯೋ ವೈರಲ್ ಆಗಿದೆ. ಡಿಎಂಕೆ ಪಕ್ಷದ ನಾಯಕನ ಹೇಳಿಕೆಗೆ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ತೀಕ್ಷ್ಣವಾಗಿ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಏನಿದು ಹೇಳಿಕೆ?:
ತಮಿಳುನಾಡಿನ ತೆಂಕಸಿ ಜಿಲ್ಲೆಯಲ್ಲಿ ಎಸ್‌ಐಆರ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಡಿಎಂಕೆ ಪಕ್ಷದ ನಾಯಕ ಹಾಗೂ ದಕ್ಷಿಣ ಜಿಲ್ಲಾ ಕಾರ್ಯದರ್ಶಿ ಜಯಪಾಲನ್ ಅವರು ಪ್ರಧಾನಿ ಮೋದಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಜೈಪಾಲನ್ ಮೋದಿಯನ್ನು ನರಕಾಸುರನಿಗೆ ಹೋಲಿಸಿದ್ದಾರೆ.
ಅವರನ್ನು ನಿರ್ಮೂಲನೆ ಮಾಡುವುದರಿಂದ ಮಾತ್ರ ತಮಿಳುನಾಡಿಗೆ ಲಾಭವಾಗಬಹುದು. ನಾವು ಈ ಯುದ್ಧವನ್ನು ಒಗ್ಗಟ್ಟಿನಿಂದ ಹೋರಾಡಿ ವಿಜಯ ಸಾಧಿಸಬೇಕು ಎಂದು ಹೇಳಿದ್ದರು. ಇದೀಗ ಬಿಜೆಪಿ ಅವರನ್ನು ಬಂಧಿಸಬೇಕೆಂದು ಪಟ್ಟು ಹಿಡಿದಿದೆ.
ಪ್ರಧಾನಿ ಮೋದಿ ಬುಧವಾರ ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿರುವ ಶ್ರೀ ಸತ್ಯ ಸಾಯಿ ಬಾಬಾ ಅವರ ಪವಿತ್ರ ಯಾತ್ರಾ ಸ್ಥಳಕ್ಕೆ ಮೊದಲು ಭೇಟಿ ನೀಡಿ ಇದಾದ ನಂತರ ಅವರು ತಮಿಳುನಾಡಿನ ಕೊಯಮತ್ತೂರಿಗೆ ಪ್ರಯಾಣಿಸಲಿದ್ದಾರೆ. ಅಲ್ಲಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ 21 ನೇ ಕಂತನ್ನು ರೈತರಿಗೆ ಬಿಡುಗಡೆ ಮಾಡಲಿದ್ದಾರೆ.

