ಟಾಟಾ ಹೆಲಿಕಾಪ್ಟರ್ ಅಸೆಂಬ್ಲಿ ಘಟಕ ನಿರ್ಮಾಣ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವೇಮಗಲ್‌: ಟಾಟಾ ಹೆಲಿಕಾಪ್ಟರ್ ಅಸೆಂಬ್ಲಿ ಘಟಕ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹೇಳಿದರು. ಟಾಟಾ ಅಡ್ವಾನ್ಸ್ ಸಿಸ್ಟಮ್ಸ್  ಲಿಮಿಟೆಡ್ ಕೋಲಾರದ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಹೆಲಿಕಾಪ್ಟರ್ ಅಸೆಂಬ್ಲಿ ಘಟಕ ನಿರ್ಮಿಸುತ್ತಿದೆ.

ಈ ಸಂಬಂಧ  ಸಂಸ್ಥೆಯ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಮುಖ್ಯಸ್ಥ ಗುರು ದತ್ತಾತ್ರೇಯ ಅವರು ನಮ್ಮ ಕಚೇರಿಗೆ ಗುರುವಾರ ಆಗಮಿಸಿ ಚರ್ಚಿಸಿದರು.

- Advertisement - 

ಈ ಸಂದರ್ಭದಲ್ಲಿ, ವೇಮಗಲ್ ಘಟಕ ನಿರ್ಮಾಣದ ಪ್ರಗತಿ ಹಾಗೂ ಮುಂದಿನ ಹಂತದ ಯೋಜನೆಗಳು ಸೇರಿದಂತೆ ಹಲವು ವಿಷಯಗಳ ಕುರಿತು ಮಾಹಿತಿ ಹಂಚಿಕೊಂಡರು ಎಂದು ಸಚಿವರು ತಿಳಿಸಿದರು.

ನಮ್ಮಸರ್ಕಾರದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ವ್ಯಕ್ತಪಡಿಸಿದ ಸಚಿವರು ಈ ಯೋಜನೆ ಪೂರ್ಣಗೊಂಡ ನಂತರ  ಕರ್ನಾಟಕದ ಏರೋಸ್ಪೇಸ್ ಮತ್ತು ರಕ್ಷಣಾ ವಲಯಕ್ಕೆ ಮತ್ತಷ್ಟು ಶಕ್ತಿ ದೊರೆಯಲಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

- Advertisement - 

 

 

Share This Article
error: Content is protected !!
";