ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಾಲಾ ಫಲಿತಾಂಶ ಉತ್ತಮವಾಗಿಲ್ಲ ಎಂದು ಆರ್ಥಿಕವಾಗಿ ದಿವಾಳಿಯಾಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಶಿಕ್ಷಕರ ವೇತನ ಹಾಗೂ ಮುಂಬಡ್ತಿಗೆ ಕಡಿವಾಣ ಹಾಕಲು ಮುಂದಾಗಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.
ಆದರೆ, ಅನಕ್ಷರಸ್ಥ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಶಾಲೆಗಳ ಮೇಲ್ಛಾವಣಿ ಕುಸಿದು ಶಿಕ್ಷಕರು, ವಿದ್ಯಾರ್ಥಿಗಳು ಗಾಯಗೊಳ್ಳುತ್ತಿರುವುದು ಕಣ್ಣಿಗೆ ಬೀಳುತ್ತಿಲ್ಲ.
ಉರ್ದು ಪ್ರೇಮಿ ಸಿದ್ದರಾಮಯ್ಯ, ಮೈಸೂರಿನಲ್ಲಿ ತಾವು ಮಾತ್ರ ಐಷಾರಾಮಿ ಬಂಗಲೆಯಲ್ಲಿ ವಾಸ ಮಾಡಲು ಸವಲತ್ತು ಪಡೆದರೆ ಸಾಲದು, ಕನ್ನಡ ಪ್ರೇಮಿ ಎಂದು ಬಿಂಬಿಸಿಕೊಳ್ಳುವುದು ಬಿಟ್ಟು, ಕನ್ನಡ ಸರ್ಕಾರಿ ಶಾಲೆಗಳಿಗೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನಾದರೂ ಕೊಡಿ. ಇಲ್ಲದೆ ಹೋದರೆ ರಾಜೀನಾಮೆ ಕೊಟ್ಟು ನಿಮ್ಮ ಐಷಾರಾಮಿ ಮನೆ ಕಡೆ ನಡೆಯಿರಿ ಎಂದು ಬಿಜೆಪಿ ತಾಕೀತು ಮಾಡಿದೆ.

