ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರಿನ ವಾಗ್ದೇವಿ ವಿದ್ಯಾ ಸಂಸ್ಥೆ ಕರ್ನಾಟಕ ಆರ್ಯವೈಶ್ಯ ವಿದ್ಯಾ ಸಂಸ್ಥೆಗಳ ಒಕ್ಕೂಟ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಸಹಯೋಗದಲ್ಲಿ ರಾಜ್ಯದ ಆರ್ಯವೈಶ್ಯ ವಿದ್ಯಾ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ಶಿಕ್ಷಕರಿಗೆ ಶಿಕ್ಷಣ ತಜ್ಞರಿಂದ. ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಮಹಾಸಭೆಯ ಅಧ್ಯಕ್ಷರಾದ ಆರ್.ಪಿ ರವಿಶಂಕರ್ ರವರು ಕಾರ್ಯಗಾರ ಉದ್ಘಾಟಿಸಿ ಮಾತನಾಡಿ ಉತ್ತಮ ಭವಿಷ್ಯಕ್ಕಾಗಿ ಮಕ್ಕಳಿಗೆ ಉತ್ತಮ ಮೌಲ್ಯವರ್ಧಿತ ಶಿಕ್ಷಣ ಬೇಕಾಗಿದ್ದು . ಪ್ರಸ್ತುತ ವಿಧ್ಯಾಮಾನಕ್ಕೆ ಸರಿಸಮನಾಗಿ ಶಿಕ್ಷಣದ ಅವಶ್ಯಕತೆ ಇದೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮಹದುದ್ದೇಶ ದಿಂದ ಈ ಕಾರ್ಯಗಾರವನ್ನು ಆಯೋಜಿಸಲಾಗಿದೆ ಕಾರ್ಯಗಾರದಲ್ಲಿ ಭಾಗವಹಿಸಿರುವ ನೀವು ತರಭೇತಿಯನ್ನು ಸದುಪಯೋಗಮಾಡಿಕೊಂಡು ಉತ್ತಮ ವಿದ್ಯಾರ್ಥಿಗಳನ್ನು ನಿರ್ಮಾಣ ಮಾಡುವಲ್ಲಿ ನೀವು ಸಫಲರಾಗಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು. ಕರ್ನಾಟಕ ಆರ್ಯ ವೈಶ್ಯ ವಿದ್ಯಾ ಸಂಸ್ಥೆಗಳ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕೆ.ವಿ. ಅಮರೇಶ್ ರವರು ಮಾತನಾಡಿ ಕಳೆದ 40 ವರ್ಷಗಳಿಂದ ಈ ಸಂಘಟನೆ ಅಸ್ತಿತ್ವದಲ್ಲಿದ್ದು ಅನಿವಾರ್ಯ ಕಾರಣಗಳಿಂದ. ರಚನಾತ್ಮಕ ಕಾರ್ಯಕ್ರಮಗಳನ್ನು ಮಾಡಲಾಗಿರಲಿಲ್ಲ ನಾನು ಅಧಿಕಾರ ವಹಿಸಿಕೊಂಡ ನಂತರದಲ್ಲಿ ರಾಜ್ಯ ಪ್ರವಾಸ ಮಾಡಿ ಸುಮಾರು 22 ಜಿಲ್ಲೆಗಳಲ್ಲಿ ನಮ್ಮ ಸಮಾಜದ ಶಿಕ್ಷಣ ಸಂಸ್ಥೆಗಳನ್ನು ಗುರುತಿಸಿ ಅವರೊಂದಿಗೆ ಸತತ ಸಂಪರ್ಕ ಮಾಡಿ ಈ ಸಂಘಟನೆಗೆ ಸಹಕರಿಸುವಂತೆ ಮನವಿ ಮಾಡಿ ಈ ಕಾರ್ಯಗಾರವನ್ನು ರೂಪಿಸಲಾಯಿತು ಎಂದು ತಿಳಿಸಿದರು.
ಈ ಮಹತ್ವದ ಕಾರ್ಯಕ್ರಮ ಮಾಡಲು ಮಹಾಸಭಾಧ್ಯಕ್ಷರು ಸಹ ಸಲಹೆ ಸೂಚನೆ ಸಂಪೂರ್ಣ ಸಹಕಾರ ನೀಡಿದ್ದು ಅವರಿಗೆ ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ ಎಂದು ಅಮರೇಶ್ ಹೇಳಿದರು.
ಯಾವುದೇ ವಿದ್ಯಾರ್ಥಿ ಒಳ್ಳೆಯ ಶಿಕ್ಷಣ ಪಡೆದಲ್ಲಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿ ಯಾವಾಗಲು ಸಾದ್ಯ ಇಂದು ವಿದ್ಯಾಭ್ಯಾಸವೇ ಬಹು ದೊಡ್ಡ ಆಸ್ತಿಯಾಗಿದೆ ಆದ್ದರಿಂದ ಶಿಕ್ಷಕರ ಮೇಲೆ ಹೊಣೆಗಾರಿಕೆ ಮತ್ತು ಜವಾಬ್ದಾರಿ ಇದ್ದು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ ಸಮಾಜವನ್ನು ಮುಖ್ಯವಾಹಿನಿಗೆ ತರಬೇಕು ಎಂದು ಹೇಳಿದರು.